ಬೆಂಗಳೂರು : ಈಗಾಗಲೇ ರಾಜ್ಯಾದ್ಯಂತ ರಿಲೀಸ್ ಆಗಿ, ಯಶಸ್ವಿ ಪ್ರದರ್ಶನ ಕಾಣುತ್ತಿರುವ ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಈ ಕುರಿತು ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ನೀಡಿದ್ದು, ತಾನೂ ಕೂಡ ವೀರಭದ್ರ ದೇವರ ಆರಾಧಕ ಆಗಿರುವುದರಿಂದ ಯಾವುದೇ ಕಾರಣಕ್ಕೂ ಅವಮಾನ ಮಾಡಿಲ್ಲ ಎಂದು ಹೇಳಿದ್ದಾರೆ.
ಇಂದು ವೀರಗಾಸೆ ಕಲಾವಿದರನ್ನು ಬೆಂಗಳೂರಿನಲ್ಲಿ ಭೇಟಿ ಮಾಡುತ್ತಿದ್ದೇನೆ. ಈ ವಿಷಯವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುತ್ತೇನೆ. ನನಗೂ ವೀರಭದ್ರ ದೇವರ ಮೇಲೆ ಅಪಾರ ಭಕ್ತಿ.. ಹಾಗಾಗಿ ನನ್ನಿಂದ ಯಾವುದೇ ಅವಮಾನ ಆಗುವಂತಹ ಕೆಲಸ ಆಗಲ್ಲ ಎಂದಿದ್ದಾರೆ ಧನಂಜಯ್.
ಈಗಾಗಲೇ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಾಹಸ ಸನ್ನಿವೇಶದಲ್ಲಿ ವೀರಗಾಸೆ ಕಲಾವಿದರಿಗೆ ಒದೆಯಲಾಗಿದೆ. ಅದು ಕಲೆ ಮತ್ತು ವೀರಭದ್ರ ದೇವರಿಗೆ ಮಾಡಿದ ಅಪಮಾನ ಎಂದು ಕಲಾವಿದರು ಆಕ್ಷೇಪಿಸಿದ್ದಾರೆ.
ಹೆಡ್ ಬುಷ್ ಸಿನಿಮಾದಲ್ಲಿ ಇಂದಿರಾ ಗಾಂಧಿಯವರ ಇಂದಿರಾ ಬ್ರಿಗೇಡ್ ಪ್ರಮುಖ ಅಂಶವೇ ಆಗಿದದ್ದು, ಇಡೀ ಕಥೆಯ ಚಿತ್ರ ಓಡಲು ಅದುವೇ ಕಾರಣವೂ ಆಗಿದೆ. ಜಯರಾಜ್ ಎಂಬ ಪೊಲೀಸ್ ವಿರೋಧಿ ಪೈಲ್ವಾನ್ ಹೇಗೆಲ್ಲ ರಾಜಕೀಯ ದಾಳಕ್ಕೆ ಬಳಕೆ ಆಗಿದ್ದಾನೆ ಎನ್ನುವುದನ್ನು ಸಿನಿಮಾದಲ್ಲಿ ತೋರಿಸಲಾಗಿದೆ.