ಬೆಂಗಳೂರು : ಸ್ಯಾಂಡಲ್‌ವುಡ್ ಖ್ಯಾತ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಸಿಹಿ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಮತ್ತು ಧನ್ಯತಾ ದಂಪತಿ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡುತ್ತಿರುವುದು ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿರುವ ದಂಪತಿಗೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿಯುತ್ತಿದೆ. ‘ಬಡವ ರಾಸ್ಕಲ್’ ಮೂಲಕ ಮನೆಮಾತಾಗಿರುವ ಧನಂಜಯ್ ಅವರು ವೈಯಕ್ತಿಕ ಜೀವನದ ಈ ಸುಂದರ ಕ್ಷಣವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿರುವುದು ವಿಶೇಷ.








