ಬೆಂಗಳೂರು: ಇಂದು ನಿಧನರಾದಂತ ಸ್ಯಾಂಡಲ್ ವುಡ್ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವರ ನಿವಾಸದಲ್ಲೇ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಕುಟುಂಬದ ಮೂಲಗಳಿಂದ ಮಾಹಿತಿ ನೀಡಲಾಗಿದ್ದು, ಇಂದು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವಂತ ನಟ ದ್ವಾರಕೀಶ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಿಗ್ಗೆ 7.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇಂದು ಇಡೀ ದಿನ ದ್ವಾರಕೀಶ್ ನಿವಾಸದಲ್ಲಿ ಸಾರ್ವಜನಿಕರಿಗೆ ನಟನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಜನರು ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದಿದ್ದಾರೆ. ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಕೂಡ ಅಂತಿಮ ದರ್ಶನ ಪಡೆದಿದ್ದಾರೆ.
ಇನ್ನೂ ನಾಳೆ ಬೆಳಿಗ್ಗೆ 7.30ಕ್ಕೆ ರವೀಂದ್ರ ಕಲಾಕ್ಷೇತ್ರಕ್ಕೆ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಅಲ್ಲಿಯೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆ ನಂತ್ರ ಬೆಳಿಗ್ಗೆ 11.30ಕ್ಕೆ ಚಾಮರಾಜಪೇಟೆಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
‘UPSC ನಾಗರಿಕ ಸೇವೆ-2023’ರ ಫಲಿತಾಂಶ ಪ್ರಕಟ: ‘ಆದಿತ್ಯ ಶ್ರೀವಾಸ್ತವ’ಗೆ ಮೊದಲ ರ‍್ಯಾಂಕ್
BREAKING : ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ : ಜೆಸಿಬಿಗೆ ಆಟೋ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು