ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆ ಡಿ.24 ರಂದು ದೆಹಲಿಯನ್ನು ಪ್ರವೇಶಿಸಲಿದೆ. ಅಂದು ನಟ ಕಮಲ್ ಹಾಸನ್ ಅವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.
ನಟ, ರಾಜಕಾರಣಿ ಕಮಲ್ ಹಾಸನ್ ಅವರನ್ನು ಯಾತ್ರೆಯಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ಆಹ್ವಾನಿಸಿದ್ದಾರೆ ಎಂದು ಮಕ್ಕಳ್ ನೀಡಿ ಮೈಯಂ ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ ಡಿಸೆಂಬರ್ 24 ರಂದು ದೆಹಲಿ ಪ್ರವೇಶಿಸಲಿದ್ದು, ಸುಮಾರು ಎಂಟು ದಿನಗಳ ವಿರಾಮದ ನಂತರ ಬಿಜೆಪಿ ನೇತೃತ್ವದ ಉತ್ತರ ಪ್ರದೇಶ, ಹರಿಯಾಣಕ್ಕೆ ತೆರಳಲಿದೆ. ಮುಂದಿನ ತಿಂಗಳು ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸುವ ಮೊದಲು ಪಂಜಾಬ್ ಪ್ರವೇಶಿಸಲಿದೆ.
ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಕನ್ಯಾಕುಮಾರಿಯಿಂದ ಆರಂಭಗೊಂಡು ಎಂಟು ರಾಜ್ಯಗಳಲ್ಲಿ ಸಂಚರಿಸಿದ ಯಾತ್ರೆ ಶುಕ್ರವಾರ 100 ದಿನಗಳನ್ನು ಪೂರೈಸಿದೆ.
ಬುಧವಾರ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ಯಾತ್ರೆಯಲ್ಲಿ ಭಾಗಿಯಾಗಿದ್ದರು.
ಭಾರತವು ತನ್ನ ಗಡಿ ಪ್ರದೇಶಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದ ಪ್ರಧಾನಿ ಮೋದಿ