ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿರುವಂತ ನಟ ಮಡೆನೂರು ಮನು ಅವರು ಅವರ ಕ್ಷಮೆಯನ್ನು ಕೇಳಿರುವುದಾಗಿ ತಿಳಿದು ಬಂದಿದೆ.
ಇಂದು ಕಂಠೀರವ ಸ್ಟೂಡಿಯೋದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ನಟ ಮಡೆನೂರು ಮನು ಭೇಟಿಯಾಗಿದ್ದಾರೆ. ಅಲ್ಲಿ ಅವರನ್ನು ಕ್ಷಮೆ ಕೋರಿರುವುದಾಗಿ ಹೇಳಲಾಗುತ್ತಿದೆ.
ಅಂದಹಾಗೇ ಈ ಹಿಂದೆ ನಾಲ್ಕರಿಂದ ಐದು ಬಾರಿ ನಟ ಶಿವರಾಜ್ ಕುಮಾರ್ ಭೇಟಿಯಾಗೋದಕ್ಕೆ ಮಡೆನೂರು ಮನು ಪ್ರಯತ್ನಿಸಿದ್ದರು. ಆದರೇ ಅದು ಸಾಧ್ಯವಾಗಿರಲಿಲ್ಲ.
ಈ ಹಿಂದೆ ವೈರಲ್ ಆಗಿದ್ದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ನಟ ಮನು ಶಿವಣ್ಣನ ಕಾಣಲು ಅವರ ಮನೆಗೆ ಹೋಗಿದ್ದಾರೆ ಎನ್ನಲಾಗಿದೆ. ಇದರಲ್ಲಿ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸೇರಿದಂತೆ ಸ್ಯಾಂಡಲ್‌ವುಡ್ ನಟರ ಸಾವಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪ ಮಾಡಲಾಗಿತ್ತು.
ಈ ಹಿನ್ನೆಲೆ ಮಡೆನೂರು ಮನು ಜೈಲಿಂದ ಹೊರಬಂದ ಮೇಲೆ ಆ ಆಡಿಯೋ ನನ್ನದಲ್ಲ, ನಾನು ಎಲ್ಲ ನಟರ ಬಳಿ ಕ್ಷಮೆ ಕೇಳುವುದಾಗಿ ಹೇಳಿದ್ದರು. ಹೀಗಾಗಿ ಕ್ಷಮೆ ಕೇಳಲು ನಟ ಶಿವರಾಜ್‌ಕುಮಾರ್ ಅವರ ನಿವಾಸದ ಬಳಿ ಮಡೆನೂರು ಮನು ತಮ್ಮ ಕುಟುಂಬದೊಂದಿಗೆ ತೆರಳಿದ್ದರು. ಆದರೇ ಅದು ಸಾಧ್ಯವಾಗಿರಲಿಲ್ಲ. ಇಂದು ಕಂಠೀರವ ಸ್ಟುಡಿಯೋದಲ್ಲಿ ನಟ ಶಿವರಾಜ್ ಕುಮಾರ್ ಭೇಟಿಯಾಗಿ ನಟ ಮಡೆನೂರು ಮನು ಕ್ಷಮೆಕೇಳಿದ್ದಾರೆ.
‘ವಾರ್ಷಿಕ ಫಾಸ್ಟ್ ಟ್ಯಾಗ್ ಪಾಸ್’ ಪಡೆಯುವುದು ಹೇಗೆ? ಯಾರೆಲ್ಲಾ ಅರ್ಹರು? ಇಲ್ಲಿದೆ ಮಾಹಿತಿ | FASTag Annual Pass
BIG NEWS : ಧರ್ಮಸ್ಥಳ ಕೇಸ್ ಶೇ.90ರಷ್ಟು ತನಿಖೆ ಮುಗಿದಿದೆ, ‘NIA, CBI’ ಅಗತ್ಯವಿಲ್ಲ: ಸಚಿವ ರಾಮಲಿಂಗಾರೆಡ್ಡಿ