ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಕುರಿತು ಪತ್ರದ ಮೂಲಕ ನಟ ರಕ್ಷಿತ್ ಶೆಟ್ಟಿ ಅವರು ಸ್ಪಷ್ಟನೆ ನೀಡಿದ್ದಾರೆ.
ಕಾಪಿರೈಟ್ ಉಲ್ಲಂಘನೆ ಪ್ರಕರಣ ಸಂಬಂಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಶಖಲಾಗಿದೆ. ನ್ಯಾಯ ಎಲ್ಲಿದೆ ಹಾಗೂ ಗಾಳಿಮಾತು ಚಿತ್ರದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಎಂಆರ್ ಟಿ ಮ್ಯೂಸಿಕ ಪಾಲುದಾರ ನವೀಕ್ ಕುಮಾರ್ ಎಂಬುವರು ದೂರು ನೀಡಿದ್ದು, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಈ ಕುರಿತು ಪತ್ರದ ಮೂಲಕ ಸ್ಪಷ್ಟನೆ ನೀಡಿರುವ ರಕ್ಷಿತ್ ಶೆಟ್ಟಿ, ನಾವು ಈ ಬಹಿರಂಗ ಪತ್ರವನ್ನು ಎಂ ಆರ್ ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ ಎರಡು ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು. ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು. ಹಾಗು ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರಲು.
ಬಳಕೆಯವ ವಿವರ:
1. ತರಗತಿಯೊಂದಲ್ಲಿ ಶಾಲಾಬಾಲಕಿ “ಒಮ್ಮೆ ನಿನ್ನನ್ನು” ಹಾಡನ್ನು ಸಹಪಾಠಿಗಳ ಮುಂದೆ ಹಾಡುವುದು.
2. ಮನೆಯ ಟಿವಿಯಲ್ಲಿ – “ನ್ಯಾಯ ಎಲ್ಲಿದೆ” ಹಾಡಿನ ಪ್ರಸಾರಣೆ.
ಈ ಮುಂಚೆ, ಅಂದರೆ, ಬ್ಯಾಚುಲರ್ ಪಾರ್ಟಿ ಸಿನಿಮ ತೆರೆಕಾಣುವುದಕ್ಕೂ ಮುನ್ನವೆ ನಾವು ಎಂ ಆರ್ ಟಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಈ ಕುರಿತು ಮಾತು ಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ ನಮ್ಮ ಬಡ್ಡೆಟ್ ಅನ್ನು ಮೀರಿತ್ತು. ಎಂ ಆರ್ ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರುಮಾತುಕತೆಗೆ ತಯಾರಿರರಿಲ್ಲ. ಈಗ, ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ ಐ ಆರ್ ದಾಖಲಾಗಿದೆ.
ಇದು ನಿಜವಾಗಿಯು ಹಾಡಿನ ಹಕ್ಕು ಉಲ್ಲಂಘನೆಯೆ? ಹೌದಾಗಿದ್ದೇ ಆದಲ್ಲಿ, ನಾವು ತರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂ ಆರ್ ಟಿ ಸಂಸ್ಥೆಯಿಂದ ಕೇಳಲ್ಪಟ್ಟದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ, ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು! ಇದೊಂದು ಯಕ್ಷ ಪ್ರಶ್ನೆ! ಇದಕ್ಕೆ ಉತ್ತರ ನಾವು ಹುಡುಕ ಬಯಸುತ್ತೇವೆ. ಹಾಗಾಗಿ, ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಿಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿನಿಮ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು, ನಮ್ಮ ಈ ಪ್ರಾಮಾಣಿಕ ಪ್ರಯತ್ನ ಎಂದು ತಿಳಿಸಿದ್ದಾರೆ.