ಬೆಂಗಳೂರು : ನಟ ಶಿವರಾಜ್ ಕುಮಾರ್ ಫಿಟ್ ಆಗಿದ್ದು, ಜನವರಿ 25 ಕ್ಕೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಶಿವರಾಜ್ ಕುಮಾರ್ ಆರೋಗ್ಯವಾಗಿದ್ದು, ಹಿಂದಿಗಿಂತಲೂ ಹೆಚ್ಚು ಜೋಶ್ ನಲ್ಲಿದ್ದಾರೆ. ಶಿವಣ್ಣ ತಲೆಗೆ ಒಂದು ಸ್ಟಂಟ್, ಹೃದಯದಲ್ಲಿ ಒಂದು ಸ್ಟಂಟ್ ಇದೆ. ಶಿವಣ್ಣ ಪ್ರತಿದಿನ 4-5 ಕಿ.ಮೀ ವಾಕಿಂಗ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಮೆರಿಕಾದಲ್ಲಿ ಶಿವಣ್ಣಿಗೆ ಉತ್ತಮ ಚಿಕಿತ್ಸೆ ನೀಡಲಾಗಿದೆ. ಒಟ್ಟು ಆಪರೇಷನ್ ಮಾಡಲಾಗಿದೆ. ಶಿವರಾಜ್ ಕುಮಾರ್ ಸದ್ಯ ಫಿಟ್ ಆಗಿದ್ದು, ಜ.25 ಕ್ಕೆ ಬೆಂಗಳೂರಿಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.