ಬೆಂಗಳೂರು: ಫೆಬ್ರವರಿ 2, 3 ರಿಂದ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ ಆರಂಭಗೊಳ್ಳಲಿದೆ. ಇದರ ಅಂಗವಾಗಿ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದಂತ ಶಾಸಕ ಗೋಪಾಲಕೃಷ್ಣ ಬೇಳೂರು ಜಾತ್ರೆಗೆ ಆಹ್ವಾನಿಸಿದರು.
ಇಂದು ಬೆಂಗಳೂರಿನ ನಟ ಶಿವರಾಜ್ ಕುಮಾರ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದಂತ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಫೆಬ್ರವರಿ 2, 3ರಿಂದ ಆರಂಭಗೊಳ್ಳಲಿರುವಂತ ಮಾರಿಕಾಂಬ ಜಾತ್ರೆಗೆ ಆಹ್ವಾನಿಸಿದರು. ಅಲ್ಲದೇ ತಪ್ಪದೇ ಜಾತ್ರೆಗೆ ಬರುವಂತೆಯೂ ಕೋರಿದರು.
ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಹ್ಬಾನಕ್ಕೆ ನಟ ಶಿವರಾಜ್ ಕುಮಾರ್, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಸಾಗರದ ಮಾರಿಕಾಂಬ ಜಾತ್ರೆಗೆ ಆಗಮಿಸುವ ಭರವಸೆ ನೀಡಿರುವುದಾಗಿ ಹೇಳಲಾಗುತ್ತಿದೆ. ಅಲ್ಲದೇ ಅವರು ಸಾಗರದ ಮಾರಿಕಾಂಬ ಜಾತ್ರೆಗೆ ಆಗಮಿಸುವ ನಿರೀಕ್ಷೆ ಇದೆ.
ಇದೇ ಸಂದರ್ಭದಲ್ಲಿ ನಟ ಶಿವರಾಜ್ ಕುಮಾರ್ ಹಾಗೂ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಕೆಲ ಕಾಲ ಹಲವು ವಿಚಾರಗಳ ಕುರಿತಂತೆ ಚರ್ಚೆ ನಡೆಸಿದ್ದಾಗಿ ತಿಳಿದು ಬಂದಿದೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು








