ಸುಭಾಷಿತ :

Wednesday, January 29 , 2020 9:37 PM

ಶೂಟಿಂಗ್ ವೇಳೆ ಕಿರುತೆರೆ ನಟಿಗೆ ಹೃದಯಾಘಾತ : ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ


Saturday, November 23rd, 2019 10:49 am

ಮುಂಬೈ: ವೆಬ್​ ಸರಣಿ ಶೂಟಿಂಗ್ ಮಾಡುತ್ತಿದ್ದ ವೇಳೆ ಕಿರುತೆರೆ ನಟಿ ಗೆಹಾನಾ ವಶಿಷ್ಟ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಇದೀಗ ಅವರ ಆರೋಗ್ಯ ಸ್ಥಿತಿ ತೀರ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ರೀತಿಯ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈಗಾಗಲೇ ಅವರಿಗೆ ವೆಂಟಿಲೇಟರ್​​ ಅಳವಡಿಸಲಾಗಿದ್ದು, ಮಧುಮೇಹದಿಂದ ಬಳಲುತ್ತಿದ್ದ ಅವರು ಕಡಿಮೆ ರಕ್ತದೊತ್ತಡದಿಂದಾಗಿ ಅವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಮುಂಬೈನಲ್ಲಿ ವೆಬ್​ ಸರಣಿಗಾಗಿ ಶೂಟಿಂಗ್​​ನಲ್ಲಿ ಭಾಗಿಯಾಗಿದ್ದ ವೇಳೆ ಏಕಾಏಕಿಯಾಗಿ ಪ್ರಜ್ಞೆ ತಪ್ಪಿದ್ದು, ತಕ್ಷಣ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೆಹಾನಾ ಕಳೆದ 48 ಗಂಟೆಗಳಿಂದ ನಿರಂತರವಾಗಿ ಶೂಟಿಂಗ್​​ನಲ್ಲಿ ಭಾಗಿಯಾಗಿದ್ದು, ಯಾವುದೇ ರೀತಿಯ ಆಹಾರ ಸೇವನೆ ಮಾಡದೆ, ಎನರ್ಜಿ ಪಾನೀಯ ಮತ್ತು ಟ್ಯಾಬ್ಲೆಟ್ ಸೇವನೆಯಿಂದ ಹೃದಯಾಘಾತವಾಗಿದೆ ಎನ್ನಲಾಗುತ್ತಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions