ಮಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ನಟಿ, ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಅವರು ತುಳುನಾಡಿನ ಆರಾಧ್ಯ ದೈವವಾದ ಸ್ವಾಮಿ ಕೊರಗಜ್ಜನಿಗೆ ಹರಕೆ ಕೋಲ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿರುವ ಕೊರಗಜ್ಜ ಸನ್ನಿಧಿಗೆ ಭೇಟಿ ನೀಡಿದ ನಟಿ, ವಿಶೇಷ ಪೂಜೆ ಸಲ್ಲಿಸಿ ತಮ್ಮ ಹರಕೆಯನ್ನು ಪೂರ್ಣಗೊಳಿಸಿದ್ದಾರೆ.
ತಾನು ಅಂದುಕೊಂಡ ಕಾರ್ಯಗಳು ಯಶಸ್ವಿಯಾಗಿ ನೆರವೇರಿದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ಸಲ್ಲಿಸುವುದಾಗಿ ರಚಿತಾ ರಾಮ್ ಹರಕೆ ಹೊತ್ತಿದ್ದರು. ಅದರಂತೆ ಇದೀಗ ದೈವದ ಸನ್ನಿಧಿಗೆ ಆಗಮಿಸಿ ಭಕ್ತಿಯಿಂದ ಹರಕೆ ಒಪ್ಪಿಸಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ರಚಿತಾ ಬ್ಯುಸಿ!
ರಚಿತಾ ರಾಮ್ ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ವಿವಿಧ ಭಾಷೆಗಳಿಂದ ಅವರಿಗೆ ದೊಡ್ಡ ಆಫರ್ಗಳು ಹರಿದುಬರುತ್ತಿವೆ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜೊತೆ ‘ಕ್ರಿಮಿನಲ್’ ಹಾಗೂ ನೀನಾಸಂ ಸತೀಶ್ ಕಾಂಬಿನೇಷನ್ನ ಬಹುನಿರೀಕ್ಷಿತ ‘ಅಯೋಗ್ಯ 2’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
ಕಾಲಿವುಡ್ನ ದೊಡ್ಡ ನಿರ್ಮಾಣ ಸಂಸ್ಥೆಯೊಂದರ ಜೊತೆ ಮಾತುಕತೆ ನಡೆದಿದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ.ಟಾಲಿವುಡ್ನಲ್ಲಿ ಎರಡು ಪ್ರಮುಖ ಸಿನಿಮಾಗಳಿಗೆ ಸಹಿ ಮಾಡಿದ್ದು, ಇದೇ ತಿಂಗಳಲ್ಲಿ ಈ ಚಿತ್ರಗಳ ಅನೌನ್ಸ್ಮೆಂಟ್ ಹೊರಬೀಳಲಿದೆ ಎಂದು ತಿಳಿದುಬಂದಿದೆ.
ಕೈತುಂಬಾ ಸಿನಿಮಾಗಳನ್ನು ಹೊಂದಿರುವ ನಟಿ, ಸಿನಿಮಾಗಳ ಯಶಸ್ಸಿಗಾಗಿ ಕೊರಗಜ್ಜನ ಆಶೀರ್ವಾದ ಪಡೆದಿದ್ದಾರೆ. ದೈವದ ಸನ್ನಿಧಿಗೆ ನಟಿ ಭೇಟಿ ನೀಡಿದ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.








