ಬೆಂಗಳೂರು: ನಟಿ ರನ್ಯಾ ರಾವ್ ವಿರುದ್ಧದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಇಡಿ ಎಂಟ್ರಿಯಾಗಿತ್ತು. ಈ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಗೆ ಸೇರಿದಂತ 34.12 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.
ಈ ಮಾಹಿತಿ ನೀಡಿರುವಂತ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ದುಬೈನಿಂದ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವಂತ ನಟಿ ರನ್ಯಾ ರಾವ್ ಅವರಿಗೆ ಸೇರಿದಂತ 34.12 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ಅಡಿಯಲ್ಲಿ ನಟಿ ರನ್ಯಾ ರಾವ್ ಅವರಿಗೆ ಸಂಬಂಧಿಸಿದಂತ ಬೆಂಗಳೂರಿನ ವಿಕ್ಟೋರಿಯಾ ಲೇಔಟ್ ನಲ್ಲಿರುವಂತ ಮನೆ, ಅರ್ಕಾವತಿ ಬಡಾವಣೆಯ ನಿವೇಶನ, ತುಮಕೂರಿನ ಕೈಗಾರಿಕಾ ನಿವೇಶನ, ಆನೇಕಲ್ ತಾಲ್ಲೂಕಿನಲ್ಲಿರುವಂತ ಕೃಷಿ ಜಮೀನನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಅಂದಹಾಗೇ ನಟಿ ರನ್ಯಾ ರಾವ್ ಮಾರ್ಚ್.3ರಂದು ದುಬೈನಿಂದ ಬೆಂಗಳೂರಿಗೆ ಆಗಮಿಸಿದಾ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ಸಂದರ್ಭದಲ್ಲಿ 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನ ಸಿಕ್ಕಿತ್ತು. ಅಕ್ರಮ ಕಳ್ಳ ಚಿನ್ನ ಸಾಗಾಣಿಕೆ ಪ್ರಕರಣದಡಿ ಅವರನ್ನು ಬಂಧಿಸಲಾಗಿತ್ತು.
BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್
UPSC ಪೂರ್ವಭಾವಿ, ಮುಖ್ಯ ಪರೀಕ್ಷೆಗೆ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ