ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧಿಸಲಾಗಿದೆ. ಆಕೆಗೆ ನ್ಯಾಯಾಂಗ ಬಂಧನವಾಗಿದ್ದು, ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಜಾಮೀನು ಕೋರಿ 2ನೇ ಆರೋಪಿ ತರುಣ್ ರಾಜು ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ದುಬೈನಿಂದ 14 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸಿದಂತ ಕೇಸಲ್ಲಿ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಬಂಧನವಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಕೋರ್ಟ್ ನೀಡಿ ಆದೇಶಿಸಿದೆ. ಹೀಗಾಗಿ ನಟಿ ರನ್ಯಾ ರಾವ್ ಜೈಲುಪಾಲಾಗಿದ್ದಾರೆ.
ಇನ್ನೂ ಇದೇ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಬಾಯ್ ಫ್ರೆಂಡ್ ಎಂದೇ ಹೇಳಲಾಗುತ್ತಿದ್ದಂತ ತರುಣ್ ರಾಜು ಎಂಬುವರ ವಿರುದ್ಧವೂ ಡಿಆರ್ ಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಆರ್ಥಿಕ ಅಪರಾಧಗಳ ನ್ಯಾಯಾಲಯ ಮೊರೆ ಹೋಗಿದ್ದರು.
ಇಂದು ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯವು ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ 2ನೇ ಆರೋಪಿಯಾಗಿರುವಂತ ತರುಣ್ ರಾಜು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ವರದಿಯೊಂದರ ಪ್ರಕಾರ ದೇಶದ 100 ಕೋಟಿ ಜನರಿಗೆ ಕೊಳ್ಳುವ ಶಕ್ತಿಯಿಲ್ಲ: ಸಿಎಂ ಸಿದ್ಧರಾಮಯ್ಯ