Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಯುಪಿಯಲ್ಲಿ ಪಾಕ್ ಮೂಲದ ಬೃಹತ್ ಗೂಢಚಾರಿ ಜಾಲ ಪತ್ತೆ: ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 22 ಮಂದಿ ಬಂಧನ!

24/03/2026 9:18 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು `UPI’ ಮೂಲಕವೂ ಗ್ರಾ.ಪಂ.ತೆರಿಗೆ ಪಾವತಿಸಬಹುದು !

24/03/2026 9:13 AM

​’ಅಮೆರಿಕ ಮತ್ತು ಇಸ್ರೇಲ್ ಈಗ ಸಂಕಷ್ಟದ ಬಲೆಯಲ್ಲಿ’: ಟ್ರಂಪ್ ಸಂಧಾನದ ಹೇಳಿಕೆಯನ್ನು ತಳ್ಳಿಹಾಕಿ ಇರಾನ್ ಎಚ್ಚರಿಕೆ!

24/03/2026 9:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದ ಮೈಸೂರು ಸ್ಯಾಂಡಲ್ ವುಡ್ ಸೋಪಿಗೆ ನಟಿ ತಮನ್ನಾ ರಾಯಭಾರಿ: 57 ಹೊಸ ಉತ್ಪನ್ನ ಬಿಡುಗಡೆ
KARNATAKA

ಇಂದಿನಿಂದ ಮೈಸೂರು ಸ್ಯಾಂಡಲ್ ವುಡ್ ಸೋಪಿಗೆ ನಟಿ ತಮನ್ನಾ ರಾಯಭಾರಿ: 57 ಹೊಸ ಉತ್ಪನ್ನ ಬಿಡುಗಡೆ

By kannadanewsnow0910/02/2026 7:26 PM

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಂಕೇತವಾದ, ಹೆಂಗಳೆಯರ ಪಾಲಿಗೆ ಅಚ್ಚುಮೆಚ್ಚಿನದಾಗಿರುವ ತಿಳಿಗೆಂಪು ಬಣ್ಣದ ಮೈಸೂರು ಸಿಲ್ಕ್‌ ಸೀರೆ ಉಟ್ಟುಕೊಂಡು, ನೆರೆದಿದ್ದವರ ಮೋಡಿ ಮಾಡುವಂತೆ ವೇದಿಕೆಯ ಮೇಲೆ ನಸುನಗುತ್ತಾ ಹಿಂಬಾಗಿಲ ಮೂಲಕ ವಿಶೇಷವಾದ ರೀತಿಯಲ್ಲಿ ಪ್ರತ್ಯಕ್ಷರಾದವರು ಹೆಸರಾಂತ ನಟಿ ತಮನ್ನಾ ಭಾಟಿಯಾ. ಅವರ ಆಗಮನಕ್ಕೆ ಕಾರಣವಾಗಿದ್ದು ನಾಡಿನ ಮತ್ತೊಂದು ಐಕಾನಿಕ್‌ ಉತ್ಪನ್ನವಾದ ಮೈಸೂರು ಸ್ಯಾಂಡಲ್‌ ಸೋಪ್!‌ ಇವೆಲ್ಲ ಸೇರಿಕೊಂಡು, ತಮನ್ನಾ ಅವರು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್‌ಡಿಎಲ್‌ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಹೊಸ ಅಧ್ಯಾಯವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ಇದಕ್ಕೆ ವೇದಿಕೆಯಾಗಿದ್ದು ತಾಜ್‌ ವೆಸ್ಟ್‌ ಎಂಡ್‌ ಹೋಟೆಲಿನ ಝಗಮಗಿಸುವ ಸಭಾಂಗಣ.

ಹೌದು, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹಾಗೂ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರ ನೇತೃತ್ವದಲ್ಲಿ ಕೆಎಸ್‌ಡಿಎಲ್‌, ಹೊಸ ಯುಗಕ್ಕೆ ಕಾಲಿಟ್ಟಿದೆ. ಇದಕ್ಕೆ ಸಾಕ್ಷಿಯಾಗಿ ಹಾಲುಬಣ್ಣದ ಬೆಡಗಿ ತಮನ್ನಾ ವಿಶೇವಾಗಿ ಸಿದ್ಧಪಡಿಸಿದ್ದ ವೇದಿಕೆ‌ ಮೇಲೆ ಬೆಳಕಿನ ಹೊನಲಿನಲ್ಲಿ ನಗೆ ಸೂಸುತ್ತ ಪ್ರತ್ಯಕ್ಷರಾದರು.
ಹೊಚ್ಚಹೊಸ ಪ್ಯಾಕ್‌ನ ರೂಪ ತಾಳಿರುವ ಮೈಸೂರು ಸ್ಯಾಂಡಲ್‌ ಸೋಪ್‌ ಜತೆಗೆ ಸಂಸ್ಥೆಯ 57 ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.

ಹೀಗೆ ನವನವೀನ ಪ್ಯಾಕಿಂಗ್‌ ಪಡೆದುಕೊಂಡಿರುವ ಉತ್ಪನ್ನಗಳಲ್ಲಿ ಗಂಧದ ಎಣ್ಣೆ, ಮಲ್ಲಿಗೆ (ಜಾಸ್ಮೀನ್)‌ ಪರಿಮಳದ ಸೋಪು, ಸುಗಂಧದ್ರವ್ಯ, ಟೂತ್‌ ಪೇಸ್ಟ್‌, ಕೊಬ್ಬರಿ ಎಣ್ಣೆ, ಪೆಟ್ರೋಲಿಯಂ ಜೆಲ್ಲಿ, ಸಾವಯವ ಉತ್ಪನ್ನಗಳವರೆಗೆ 60 ಉತ್ಪನ್ನಗಳಿವೆ. ಇದರೊಂದಿಗೆ ಕೆಎಸ್‌ಡಿಎಲ್‌ನ ಮುಂದಿನ ಹಾದಿ ಅಲ್ಲಿ ತೆರೆದುಕೊಂಡಿತು. ಜೊತೆಯಲ್ಲೇ ತಮನ್ನಾ ಸಂಸ್ಥೆಯ ಪರವಾಗಿ ನಡೆಸಿರುವ ಪ್ರಚಾರದ ಹತ್ತಾರು ಜಾಹೀರಾತುಗಳು ಕೂಡ ಬಿಡುಗಡೆಯಾದವು. ಇದೇ ಸಂದರ್ಭದಲ್ಲಿ ಸಂಸ್ಥೆಯ ಇತಿಹಾಸವನ್ನು ಕಟ್ಟಿಕೊಡುವ ʻಸುಗಂಧ ಸಿರಿʼ ಮತ್ತು ʻಅರೋಮ್ಯಾಟಿಕ್‌ ಜರ್ನೀಸ್ʼ ಕಾಫಿ ಟೇಬಲ್‌ ಪುಸ್ತಕಗಳ ಲೋಕಾರ್ಪಣೆಯೂ ನೆರವೇರಿತು.

ಸಾಂಪ್ರದಾಯಿಕವಾಗಿ ಕಂಗೊಳಿಸುತ್ತಿದ್ದ ತಮನ್ನಾ ಮಾತನಾಡಿ, ʻಮೈಸೂರು ಸ್ಯಾಂಡಲ್‌ ಸೋಪು ಕೇವಲ ಒಂದು ಸಾಬೂನಲ್ಲ. ಇದರೊಂದಿಗೆ ಭಾವನೆಗಳು, ಬಾಲ್ಯ ಮತ್ತು ಸುಮಧುರ ನೆನೆಪುಗಳೆಲ್ಲ ಹೆಣೆದುಕೊಂಡಿವೆ. ಇದು ಪರಿಪೂರ್ಣತೆ ಮತ್ತು ಸತ್ಯಗಳ ಸಂಗಮ. ಮಾರುಕಟ್ಟೆಯಲ್ಲಿ ಇದಕ್ಕೆ ಸಾಟಿಯಾದ ಇನ್ನೊಂದು ಸೋಪ್‌ ಇಲ್ಲ. ಮೈಸೂರು ಸ್ಯಾಂಡಲ್‌ ಸೋಪ್‌ಗೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಮುಂದಿನ ಎರಡು ವರ್ಷ ನಾನು ಈ ಗುಣಮಟ್ಟದ ಉತ್ಪನ್ನಗಳ ರಾಯಭಾರಿಯಾಗಿ ಕೆಲಸ ಮಾಡಲಿದ್ದೇನೆ,ʼ ಎಂದು ಬಣ್ಣಿಸಿದರು.

ಬಳಿಕ ಮಾತನಾಡಿದ ಸಚಿವ ಎಂ ಬಿ ಪಾಟೀಲ, ʻಕೆಎಸ್‌ಡಿಎಲ್‌ ಕೇವಲ ಸ್ಯಾಂಡಲ್‌ ಸೋಪ್‌ಗೆ ಮಾತ್ರ ಸೀಮಿತವಾಗಿಲ್ಲ. ನಾವೀಗ ಜಾಸ್ಮೀನ್‌ ಪರಿಮಳದ ಐಷಾರಾಮಿ ಸೋಪನ್ನೂ ತಯಾರಿಸುತ್ತಿದ್ದೇವೆ. ಮಲ್ಲಿಗೆಯ ತೈಲ ಲೀಟರಿಗೆ 4 ಲಕ್ಷ ರೂಪಾಯಿಗೂ ಜಾಸ್ತಿ ಇದೆ. ನಮ್ಮಲ್ಲಿ ತಯಾರಾಗುವ ಈ ಸೋಪ್‌ಗೆ 400 ರೂಪಾಯಿ ಇಟ್ಟಿದ್ದೇವೆ. ಯೂರೋಪಿನ ಮಾರುಕಟ್ಟೆಯಲ್ಲಿ ಈ ತರಹದ ಸಾಬೂನಿಗೆ ಭಾರೀ ಬೇಡಿಕೆ ಇದೆ. ಇದೇ ರೀತಿಯಲ್ಲಿ ಸುಗಂಧ ದ್ರವ್ಯಗಳ ವಲಯವನ್ನೂ ಪ್ರವೇಶಿಸಿದ್ದೇವೆ. ಇದಕ್ಕಾಗಿ ಸಂಸ್ಥೆಯ ಉನ್ನತಾಧಿಕಾರಿಗಳು ಕೊಯಮತ್ತೂರು, ಕನೌಜ್‌ಗೆ ತೆರಳಿ, ಒಡಂಬಡಿಕೆ ಮಾಡಿಕೊಂಡು ಬಂದಿದ್ದಾರೆʼ ಎಂದರು.

ಜತೆಗೆ, ಕೆಎಸ್‌ಡಿಎಲ್‌ ಉತ್ಪನ್ನಗಳ ಪೈಕಿ ಸದ್ಯಕ್ಕೆ ಶೇಕಡ 1ರಷ್ಟು ಮಾತ್ರ ರಫ್ತಾಗುತ್ತಿದೆ. ಇದನ್ನು ಹೆಚ್ಚು ಮಾಡಲು ನೀಲನಕ್ಷೆ ಸಿದ್ಧಪಡಿಸಲಾಗಿದೆ. ಹೊಸ ಉತ್ಪನ್ನಗಳಲ್ಲಿ ಮಹಾರಾಜ ಮತ್ತು ಮಹಾರಾಣಿ ಸೀರೀಸ್‌ ಇವೆ. ಪರಂಪರೆಯ ಮಹತ್ವವನ್ನು ಬಿಟ್ಟುಕೊಡದೆ ಸಮಕಾಲೀನ ಅಭಿರುಚಿಯನ್ನು ಇಲ್ಲಿ ಬೆಸೆದಿದ್ದೇವೆ ಎಂದು ಅವರು ನುಡಿದಿದ್ದಾರೆ.

ಸಂಸ್ಥೆಯ ಅಧ್ಯಕ್ಷ ಸಿ ಎಸ್‌ ಅಪ್ಪಾಜಿ ನಾಡಗೌಡ ಮಾತನಾಡಿ, ʻಈ ಸಾಲಿನಲ್ಲಿ ಸಂಸ್ಥೆಯ ವಹಿವಾಟು 2,000 ಕೋಟಿ ರೂ. ಮುಟ್ಟಲಿದ್ದು, ಲಾಭವು 500 ಕೋಟಿ ರೂ. ದಾಟಲಿದೆ. ಇದಕ್ಕಾಗಿ ಆಧುನಿಕ ವಹಿವಾಟು ತಂತ್ರಗಳನ್ನು ಅಳವಡಿಸಿಕೊಳ್ಳಲಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ 3 ಕೋಟಿ ಫಾಲೋಯರ್ಸ್‌ ಹೊಂದಿರುವ, ಅಖಿಲ ಭಾರತ ಮಟ್ಟದ ವರ್ಚಸ್ಸಿರುವ ತಮನ್ನಾ ಅವರನ್ನು ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ನೇಮಿಸಿಕೊಂಡಿರುವುದು ಇದರ ಒಂದು ಭಾಗವಾಗಿದೆʼ ಎಂದಿದ್ದಾರೆ.

ಕೆಎಸ್ ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಎಂ. ಪ್ರಶಾಂತ್‌ ಪ್ರಾಸ್ತಾವಿಕವಾಗಿ‌ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಸ್ವತಂತ್ರ ನಿರ್ದೇಶಕ ಅರವಿಂದ ಗಲಗಲಿ, ತಾಂತ್ರಿಕ ಸಲಹೆಗಾರ ರಜನೀಕಾಂತ್‌, ಶಿವಕುಮಾರ್‌, ಪ್ರತಿಮಾ ವಂದಗಾರು, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ, ಸ್ವತಂತ್ರ ನಿರ್ದೇಶಕ ಶಾಮರಾಜು ಮುಂತಾದವರು ಉಪಸ್ಥಿತರಿದ್ದರು.

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆದವರಿಗೆ GBA ಶಾಕ್: 3 ತಿಂಗಳಲ್ಲಿ 30 ಲಕ್ಷ ದಂಡ ವಸೂಲಿ

BREAKING: ಬಾಲಿವುಡ್ ನಟ ರಣವೀರ್ ಸಿಂಗ್ ಗೆ ವಾಟ್ಸ್ ಆಪ್ ಮೂಲಕ ಬೆದರಿಕೆ: ಕೋಟಿ ಕೋಟಿ ಹಣಕ್ಕೆ ಬೇಡಿಕೆ

Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು `UPI’ ಮೂಲಕವೂ ಗ್ರಾ.ಪಂ.ತೆರಿಗೆ ಪಾವತಿಸಬಹುದು !

24/03/2026 9:13 AM1 Min Read

ಹೊಟ್ಟೆಯ ಬೊಜ್ಜು ಕರಗಿಸಿ ತೂಕ ಇಳಿಸಿಕೊಳ್ಳಲು ಇಲ್ಲಿದೆ ಸುಲಭವಾದ ಮನೆಮದ್ದು: ರಾತ್ರಿ ಮಲಗುವ ಮುನ್ನ ಈ ಪಾನೀಯ ಕುಡಿದರೆ ಸಾಕು!

24/03/2026 8:57 AM1 Min Read

ಪವರ್ ಪೆಟ್ರೋಲ್ Vs ಸಾಮಾನ್ಯ ಪೆಟ್ರೋಲ್: ನಿಮ್ಮ ವಾಹನಕ್ಕೆ ಯಾವುದು ಉತ್ತಮ? ಇಲ್ಲಿದೆ ಪೂರ್ಣ ಮಾಹಿತಿ

24/03/2026 8:51 AM2 Mins Read
Recent News

BREAKING: ಯುಪಿಯಲ್ಲಿ ಪಾಕ್ ಮೂಲದ ಬೃಹತ್ ಗೂಢಚಾರಿ ಜಾಲ ಪತ್ತೆ: ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ 22 ಮಂದಿ ಬಂಧನ!

24/03/2026 9:18 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು `UPI’ ಮೂಲಕವೂ ಗ್ರಾ.ಪಂ.ತೆರಿಗೆ ಪಾವತಿಸಬಹುದು !

24/03/2026 9:13 AM

​’ಅಮೆರಿಕ ಮತ್ತು ಇಸ್ರೇಲ್ ಈಗ ಸಂಕಷ್ಟದ ಬಲೆಯಲ್ಲಿ’: ಟ್ರಂಪ್ ಸಂಧಾನದ ಹೇಳಿಕೆಯನ್ನು ತಳ್ಳಿಹಾಕಿ ಇರಾನ್ ಎಚ್ಚರಿಕೆ!

24/03/2026 9:04 AM

ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: ಒಂದೇ ದಿನದಲ್ಲಿ 1 ಲಕ್ಷ ರೂ. ಇಳಿಕೆ! ಜನವರಿ ನಂತರದ ಕನಿಷ್ಠ ಮಟ್ಟಕ್ಕೆ ಚಿನ್ನದ ದರ

24/03/2026 8:57 AM
State News
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ನು `UPI’ ಮೂಲಕವೂ ಗ್ರಾ.ಪಂ.ತೆರಿಗೆ ಪಾವತಿಸಬಹುದು !

By kannadanewsnow5724/03/2026 9:13 AM KARNATAKA 1 Min Read

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಇನ್ನು ಮುಂದೆ ತಮ್ಮ ಆಸ್ತಿ ತೆರಿಗೆಯನ್ನು ಪಾವತಿಸಲು ಪಂಚಾಯಿತಿ ಕಚೇರಿಗಳಿಗೆ ಅಲೆಯಬೇಕಿಲ್ಲ. ಡಿಜಿಟಲ್…

ಹೊಟ್ಟೆಯ ಬೊಜ್ಜು ಕರಗಿಸಿ ತೂಕ ಇಳಿಸಿಕೊಳ್ಳಲು ಇಲ್ಲಿದೆ ಸುಲಭವಾದ ಮನೆಮದ್ದು: ರಾತ್ರಿ ಮಲಗುವ ಮುನ್ನ ಈ ಪಾನೀಯ ಕುಡಿದರೆ ಸಾಕು!

24/03/2026 8:57 AM

ಪವರ್ ಪೆಟ್ರೋಲ್ Vs ಸಾಮಾನ್ಯ ಪೆಟ್ರೋಲ್: ನಿಮ್ಮ ವಾಹನಕ್ಕೆ ಯಾವುದು ಉತ್ತಮ? ಇಲ್ಲಿದೆ ಪೂರ್ಣ ಮಾಹಿತಿ

24/03/2026 8:51 AM

ಸಾಗರದ ಶೇಡ್ತಿಕೇರಿ ಶಾಲೆಯ ಘಟನೆ: ಮಗುವಿನ ರಕ್ಷಣೆಯೋ ಅಥವಾ ಆರೋಪಿ ಶಿಕ್ಷಕರ ರಕ್ಷಣೆಯೋ?- ಜಿ.ಟಿ ಸತ್ಯನಾರಾಯಣ ಪ್ರಶ್ನೆ

24/03/2026 8:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.