ನವದೆಹಲಿ: ಅದಾನಿ-ಹಿಂದರ್ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಹಲವಾರು ಅರ್ಜಿಗಳು ಸಲ್ಲಿಕೆಯಾದ ತಿಂಗಳ ನಂತರ ಭಾರತದ ಸುಪ್ರೀಂ ಕೋರ್ಟ್ ಇಂದು ಬಹುನಿರೀಕ್ಷಿತ ತೀರ್ಪನ್ನು ನೀಡಲಿದೆ. ಕಳೆದ ವರ್ಷ ನವೆಂಬರ್ನಲ್ಲಿ ಈ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.
ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ (ಒಸಿಸಿಆರ್ಪಿ) ಮತ್ತು ಹಿಂಡೆನ್ಬರ್ಗ್ ರಿಸರ್ಚ್ನಂತಹ ಸಂಸ್ಥೆಗಳಿಂದ ಪಡೆದ ಮಾಹಿತಿಯ ಮೇಲೆ ಅರ್ಜಿದಾರರು ಅವಲಂಬಿತರಾಗಿರುವ ಬಗ್ಗೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅಸಮಾಧಾನ ವ್ಯಕ್ತಪಡಿಸಿದ್ದರು. ವಿಶ್ವಾಸಾರ್ಹ ಮಾಹಿತಿಗಾಗಿ ಭಾರತೀಯ ತನಿಖಾ ಸಂಸ್ಥೆಗಳನ್ನು ಅವಲಂಬಿಸುವ ನ್ಯಾಯಾಲಯದ ಅಗತ್ಯವನ್ನು ಅವರು ಒತ್ತಿ ಹೇಳಿದರು.