ಬೆಂಗಳೂರು: ʻಆದರ್ಶ ವಿದ್ಯಾಲಯʼ 6ನೇ ತರಗತಿ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ 2024-25ನೇ ಸಾಲಿಗೆ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಯ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿರುವ ಬಗ್ಗೆ ತಿಳಿಸಿದ್ದು, ಆದರ್ಶ ವಿದ್ಯಾಲಯಗಳಿಂದ 6ನೇ ತರಗತಿ ದಾಖಲಾತಿಯ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿರುವಂತೆ ಕೋರಿಕೆ ಅರ್ಜಿಗಳು ಸಲ್ಲಿಕೆಯಾಗಿವೆ.
2024-25ನೇ ಸಾಲಿಗೆ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ದಾಖಲಾತಿಯ ಪ್ರವೇಶ ಪರೀಕ್ಷೆಯ ಆನ್ಲೈನ್ ಅರ್ಜಿ ಸಲ್ಲಿಕೆ ದಿನಾಂಕ: 17/01/2024 ರಿಂದ 06/02/2024ರವರೆಗೆ ನಿಗದಿಪಡಿಸಲಾಗಿತ್ತು, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲು ಉಲ್ಲೇಖದಂತೆ ಬೇಡಿಕೆಗಳು ಬಂದಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2024-25ನೇ ಸಾಲಿಗೆ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ದಾಖಲಾತಿಯ ಆನ್ಲೈನ್ ಅರ್ಜಿ ಸಲ್ಲಿಕೆ ದಿನಾಂಕವನ್ನು ಈ ಕೆಳಗಿನಂತೆ ವಿಸ್ತರಿಸಲಾಗಿದೆ ಅಂತ ಹೇಳಲಾಗಿದೆ.