Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ
KARNATAKA

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಷ್ಟದ ಕಾರಣದಿಂದಾಗಿ ಸದ್ಯಕ್ಕೆ ಸ್ಥಗಿತಗೊಂಡಿರುವ ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆಯನ್ನು ಸದ್ಯದಲ್ಲೇ ನಡೆಯಲಿರುವ ‘ಉಡಾನ್’ (UDAN) ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸೇರಿಸಬೇಕು ಎಂದು ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಮಾರ್ಗದಲ್ಲಿ ವಿಮಾನಸೇವೆಯ ಪುನಾರಂಭವು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಒಟ್ಟಾರೆ ಪ್ರಗತಿಗೆ ಅತ್ಯಂತ ನಿರ್ಣಾಯಕವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಸಂಬಂಧವಾಗಿ ಸಚಿವ ಎಂ.ಬಿ. ಪಾಟೀಲ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಅಧಿಕೃತ ಪತ್ರ ಬರೆದು ವಿಶೇಷ ಆಗ್ರಹ ಮಾಡಿದ್ದಾರೆ.

ಪ್ರಾದೇಶಿಕ ಪ್ರಗತಿಗೆ ಹಿನ್ನಡೆ: ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣವು 2023ರ ಫೆಬ್ರವರಿಯಲ್ಲಿ ಲೋಕಾರ್ಪಣೆಗೊಂಡು ಕಾರ್ಯಾರಂಭ ಮಾಡಿತ್ತು. ಇದಾದ ನಂತರ ಇಂಡಿಗೋ ವಿಮಾನಯಾನ ಸಂಸ್ಥೆಯು ಶಿವಮೊಗ್ಗ-ಬೆಂಗಳೂರು ನಡುವೆ ಯಶಸ್ವಿಯಾಗಿ ವಿಮಾನ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಆರ್ಥಿಕ ನಷ್ಟದ ಕಾರಣವನ್ನು ನೀಡಿ ಕಳೆದ ಕೆಲವು ತಿಂಗಳುಗಳಿಂದ ಈ ಸೇವೆಯನ್ನು ಹಠಾತ್ತನೆ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಶಿವಮೊಗ್ಗ ಸೇರಿದಂತೆ ಚಿಕ್ಕಮಗಳೂರು, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಸಚಿವರು ಪತ್ರದಲ್ಲಿ ವಿವರಿಸಿದ್ದಾರೆ. ಅಲ್ಲದೆ, ಈ ಭಾಗದ ಆರ್ಥಿಕ, ಕೃಷಿ, ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಬೆಳವಣಿಗೆಗೆ ಇದು ದೊಡ್ಡ ಮಟ್ಟದ ಹಿನ್ನಡೆ ತಂದಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಮಧ್ಯಸ್ಥಿಕೆಗೆ ಮನವಿ: “ಶಿವಮೊಗ್ಗದಿಂದ ರಾಜಧಾನಿ ಬೆಂಗಳೂರಿಗೆ ನೇರ ವಿಮಾನ ಸಂಪರ್ಕ ಇಲ್ಲದೇ ಇರುವುದರಿಂದ ಮಲೆನಾಡು ಭಾಗದಿಂದ ದೇಶದ ಇತರೆ ಮಹಾನಗರಗಳಿಗೆ ಹಾಗೂ ವಿದೇಶಗಳಿಗೆ ಪ್ರಯಾಣಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಭಾರಿ ಸಮಸ್ಯೆಯಾಗುತ್ತಿದೆ. ಆದ್ದರಿಂದ, ವಿಜಿಟಿ ಫಂಡ್ (Viability Gap Funding – VGF) ನೆರವಿನ ಮೂಲಕ ಮುಂಬರುವ ಉಡಾನ್ ಯೋಜನೆಯ ಬಿಡ್ಡಿಂಗ್‌ನಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗವನ್ನು ಸೇರ್ಪಡೆ ಮಾಡಲು ಕೇಂದ್ರ ಸಚಿವರು ತಕ್ಷಣ ಮಧ್ಯಪ್ರವೇಶಿಸಬೇಕು” ಎಂದು ಎಂ.ಬಿ. ಪಾಟೀಲ ಕೋರಿದ್ದಾರೆ.

ನೈಟ್ ಲ್ಯಾಂಡಿಂಗ್ ಕಾಮಗಾರಿ ಪ್ರಗತಿಯಲ್ಲಿ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆಯೂ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ‘ನೈಟ್ ಲ್ಯಾಂಡಿಂಗ್’ (Night Landing) ಸೌಲಭ್ಯ ಒದಗಿಸುವ ಕಾಮಗಾರಿ ಪ್ರಸ್ತುತ ಭರದಿಂದ ಸಾಗುತ್ತಿದೆ. ಇದನ್ನು ಹೊರತುಪಡಿಸಿ ವಿಮಾನ ನಿಲ್ದಾಣಕ್ಕೆ ಬೇಕಾದ ಉಳಿದೆಲ್ಲ ಅತ್ಯಾಧುನಿಕ ಮೂಲಸೌಕರ್ಯಗಳು ಈಗಾಗಲೇ ಲಭ್ಯ ಇವೆ. ಆದ್ದರಿಂದ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವು ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪತ್ರದಲ್ಲಿ ವಿನಂತಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

3 Mins Read

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

1 Min Read

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

1 Min Read
Recent News

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

State News
KARNATAKA

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

By ಸುರೇಶ್‌ KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಅರ್ಹರಲ್ಲದವರು ಮತ್ತು ಮೃತಪಟ್ಟ ಮಹಿಳೆಯರ ಖಾತೆಗಳಿಗೂ ಹಣ ಸಂದಾಯವಾಗುತ್ತಿರುವುದು ಬಹಿರಂಗಗೊಂಡಿದೆ. ಈ…

ಉಡಾನ್ ಯೋಜನೆಯಲ್ಲಿ ಬೆಂಗಳೂರು-ಶಿವಮೊಗ್ಗ ಮಾರ್ಗ ಸೇರಿಸಿ: ಕೇಂದ್ರ ಸಚಿವರಿಗೆ ಎಂ.ಬಿ. ಪಾಟೀಲ ಪತ್ರ

ಶಿವಮೊಗ್ಗ ಜಿಲ್ಲೆಯ ಜನತೆ ಗಮನಕ್ಕೆ: ಈ ರೈಲುಗಳ ಸಂಚಾರ ನಿಯಂತ್ರಣ, ಮರು ನಿಗದಿ

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.