ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ದಿನಾಂಕ: 31.12.2024 ರಂದು ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಲ್ಲಿ ತಡರಾತ್ರಿ 2ರವರೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 31.12.2024 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ ಎಂದಿದೆ.
ಈ ಕೆಳಕಂಡ ಮಾರ್ಗದಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆ
1 G-3 ಬ್ರಿಗೇಡ್ ರಸ್ತೆ ಎಲೆಕ್ಟ್ರಾನಿಕ್ಸ್ ಸಿಟಿ
2 G-4 ಜಿಗಣಿ
3 G-2 ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಸರ್ಜಾಪುರ
4 G-6 ಕೆಂಗೇರಿ ಕೆ.ಹೆಚ್.ಬಿ. ಕ್ವಾರ್ಟ್ರ್ಸ್
5 G-7 ಜನಪ್ರಿಯ ಟೌನ್ ಶಿಪ್
6 G-8 ನೆಲಮಂಗಲ
7 G-9 ಯಲಹಂಕ ಉಪನಗರ 5ನೇ ಹಂತ
8 G-10 ಯಲಹಂಕ
9 G-11 ಬಾಗಲೂರು
10 317-G ಹೊಸಕೋಟೆ
11 SBS-13K ಚನ್ನಸಂದ್ರ
12 SBS-1K ಕಾಡುಗೋಡಿ
13 13 ಬನಶಂಕರಿ
ಅಲ್ಲದೆ, ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ/ಜಂಕ್ಷನ್ ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೃ.ರಾ.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ಗಳಿಂದ ಪ್ರಯಾಣಿಕರ ದಟ್ಟಣೆ/ಬೇಡಿಕೆಗನುಗುಣವಾಗಿ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ.
BREAKING: ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಈಶ್ವರ ದೇವಾಲಯ ನೆಲಸಮ ಮಾಡಲು ಗಜಾನನ ಸ್ವಾಮೀಜಿ ನಿರ್ಧಾರ
ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ
ಅಫ್ಘಾನ್ ತಾಲಿಬಾನ್ ಪಡೆಗಳ ಗುಂಡಿನ ದಾಳಿ: ಪಾಕ್ ಸೈನಿಕ ಸಾವು, 11 ಮಂದಿಗೆ ಗಾಯ