ಬೆಂಗಳೂರು: ಹಾಸನಾಂಬ ಜಾತ್ರೆಗೆ ತೆರಳುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಸಾರಿಗೆ ಇಲಾಖೆಯಿಂದ ಹೆಚ್ಚುವರಿ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಅವರು, ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಇದೇ ಮೊದಲ ಬಾರಿಗೆ ಜಾನಪದ ಜಾತ್ರಾ ಮಹೋತ್ಸವ, ವಸ್ತು ಪ್ರದರ್ಶನ, ಶ್ವಾನ ಪ್ರದರ್ಶನ, ಆಹಾರ ಮೇಳ ಏರ್ಪಡಿಸಲಾಗಿದೆ. ಇದರೊಂದಿಗೆ ಫಲಪುಷ್ಪ ಪ್ರದರ್ಶನ, ಪ್ರವಾಸೋದ್ಯಮ ಇಲಾಖೆಯಿಂದ ಟೂರ್ ಪ್ಯಾಕೇಜ್, ಹೆಲಿ ಟೂರಿಸಂ ಕೂಡ ಆಯೋಜನೆ ಮಾಡಲಾಗಿದೆ ಎಂದಿದ್ದಾರೆ.
ಸಾರಿಗೆ ಇಲಾಖೆಯಿಂದ ವಿವಿಧ ಜಿಲ್ಲೆ ಹಾಗೂ ಬೆಂಗಳೂರಿನಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 2,300ಕ್ಕೂ ಹೆಚ್ಚು ಬಸ್‌ಗಳನ್ನು ದರ್ಶನೋತ್ಸವಕ್ಕೆ ಪ್ರತ್ಯೇಕವಾಗಿ ನಿಯೋಜಿಸಲಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.
ಹಾಸನಾಂಬ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಇದೇ ಮೊದಲ ಬಾರಿಗೆ ಜಾನಪದ ಜಾತ್ರಾ ಮಹೋತ್ಸವ, ವಸ್ತು ಪ್ರದರ್ಶನ, ಶ್ವಾನ ಪ್ರದರ್ಶನ, ಆಹಾರ ಮೇಳ ಏರ್ಪಡಿಸಲಾಗಿದೆ. ಇದರೊಂದಿಗೆ ಫಲಪುಷ್ಪ ಪ್ರದರ್ಶನ, ಪ್ರವಾಸೋದ್ಯಮ ಇಲಾಖೆಯಿಂದ ಟೂರ್ ಪ್ಯಾಕೇಜ್, ಹೆಲಿ ಟೂರಿಸಂ ಕೂಡ ಆಯೋಜನೆ ಮಾಡಲಾಗಿದೆ. ಸಾರಿಗೆ ಇಲಾಖೆಯಿಂದ ವಿವಿಧ ಜಿಲ್ಲೆ ಹಾಗೂ… pic.twitter.com/8QaqLLBdPT
— DIPR Karnataka (@KarnatakaVarthe) October 8, 2025
SHOCKING: ಮನೆಯಲ್ಲಿ ಬಾಯ್ಲರ್ ಬಳಕೆದಾರರೇ ಎಚ್ಚರ!: ಸ್ಪೋಟಗೊಂಡು ಬಾಲಕಿ ಸಾವು, ಮೂವರ ಸ್ಥಿತಿ ಗಂಭೀರ