ಬೆಂಗಳೂರು: ನಗರದಲ್ಲಿ ನಡೆದಿದ್ದಂತ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಸಂಬಂಧ ಕೆಲ ಅಧಿಕಾರಿಗಳನ್ನು ಚುನಾವಣಾ ಆಯೋಗವು ಅಮಾನತುಗೊಳಿಸಿದೆ. ಈ ಬೆನ್ನಲ್ಲೇ, ರಾಜ್ಯ ಸರ್ಕಾರದಿಂದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ( IAS Officer ) ಹೆಚ್ಚುವರಿ ಹೊಣೆಗಾರಿಕೆ ನೀಡಿದೆ.
BIGG NEWS : ಇಂದು ಸಂಜೆ ಸಿಎಂ ಬೊಮ್ಮಾಯಿ ದೆಹಲಿಗೆ : ಸಚಿವ ಸಂಪುಟ ವಿಸ್ತರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?
ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಯ ಸ್ಪೆಷಲ್ ಕಮೀಷನರ್ ಆಗಿದ್ದಂತ ಐಎಎಸ್ ಅಧಿಕಾರಿ ಡಾ. ಹರೀಶ್ ಕುಮಾರ್ ಕೆ ಅವರಿಗೆ ಬಿಬಿಎಂಪಿಯ ಸ್ಪೆಷಲ್ ಕಮೀಷನರ್ ( ಆಡಳಿತಾಧಿಕಾರಿ) ಆಗಿ ಹೆಚ್ಚುವರಿ ಹೊಣೆಗಾರಿಕೆ ನೀಡಿದೆ.
ಇನ್ನೂ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಸಿಇಓ ಆಗಿದ್ದಂತ ಸಂಗಪ್ಪ ಅವರಿಗೆ, ಬೆಂಗಳೂರು ನಗರ ಜಿಲ್ಲಾಧಿಕಾರಿಯ ಹೆಚ್ಚುವರಿ ಹೊಣೆಗಾರಿಕೆಯನ್ನು ನೀಡಿ ಆದೇಶಿಸಿದೆ.