ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಭಾರೀ ಅವಾಂತರವೇ ಸೃಷ್ಠಿಯಾಗಿದೆ. ಸಿಲಿಕಾನ್ ಸಿಟಿಯಲ್ಲಿನ ಅತಿವೃಷ್ಟಿ ನಿರ್ವಹಣೆಗೆ ಹೆಚ್ಚುವರಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಅತಿವೃಷ್ಟಿ ನಿರ್ವಹಣೆಗೆ 8 ವಲಯಗಳ ನಿಯಂತ್ರಣ ಕೊಠಡಿಗಳ ಜೊತೆಗೆ 63 ಉಪ ವಿಭಾಗಗಳಲ್ಲಿ ಹೆಚ್ಚುವರಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ರಾಜಕಾಲುವೆಗಳ ಕಿರು ಸೇತುವೆಗಳ ವಿಸ್ತರಣೆ ಮತ್ತು ಕೆರೆಗಳ ಅಭಿವೃದ್ಧಿಗೆ ₹275 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.
ಕೆರೆಗಳಿಗೆ ₹50 ಕೋಟಿ ವೆಚ್ಚದಲ್ಲಿ ತುರ್ತು ತೂಬುಗಾಲುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ₹669 ಕೋಟಿ ಪ್ರಸ್ತಾವ ಸಿದ್ಧಪಡಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಅತಿವೃಷ್ಟಿ ನಿರ್ವಹಣೆಗೆ 8 ವಲಯಗಳ ನಿಯಂತ್ರಣ ಕೊಠಡಿಗಳ ಜೊತೆಗೆ 63 ಉಪ ವಿಭಾಗಗಳಲ್ಲಿ ಹೆಚ್ಚುವರಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ರಾಜಕಾಲುವೆಗಳ ಕಿರು ಸೇತುವೆಗಳ ವಿಸ್ತರಣೆ ಮತ್ತು ಕೆರೆಗಳ ಅಭಿವೃದ್ಧಿಗೆ ₹275 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಕೆರೆಗಳಿಗೆ ₹50 ಕೋಟಿ ವೆಚ್ಚದಲ್ಲಿ ತುರ್ತು ತೂಬುಗಾಲುವೆ… pic.twitter.com/kcVPQaiZ7V
— DIPR Karnataka (@KarnatakaVarthe) October 28, 2024
ಉಪ ಚುನಾವಣೆಯಲ್ಲಿ ಯಾವುದೇ ದಲಿತರು ನಿಮಗೆ ಮತ ಕೊಡಲ್ಲ, ಕಾಂಗ್ರೆಸ್ 3 ಕ್ಷೇತ್ರದಲ್ಲೂ ಸೋಲು: ಛಲವಾದಿ ನಾರಾಯಣಸ್ವಾಮಿ