ಮಂಡ್ಯ: ಭಾರತೀಯ ಚುನಾವಣಾ ಆಯೋಗವು (ECI) ದೇಶಾದ್ಯಂತ ಮತದಾರರ ಪಟ್ಟಿಯ ನೈಜತೆಯನ್ನು ಕಾಪಾಡಲು ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಮಾಡಲು ತಿಳಿಸಿದ್ದು ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ವಿಶೇಷ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ವಿಶೇಷ ಪರಿಷ್ಕರಣೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.
ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಿ ಮತದಾರರ ಮ್ಯಾಪಿಂಗ್ ಪ್ರಕ್ರಿಯೆ ಮಾಡಬೇಕು ಎಂದು ಅವರು ತಿಳಿಸಿದರು. ಮತದಾರರ ಪಟ್ಟಿಯಲ್ಲಿರುವ ತಪ್ಪುಗಳನ್ನು ಸರಿಪಡಿಸಲು ಬೀದಿವಾರು ಮತ್ತು ಮನೆವಾರು ಮ್ಯಾಪಿಂಗ್ ಮಾಡುವಂತೆ ತಿಳಿಸಿದರು.
ಮಂಡ್ಯ ಜಿಲ್ಲೆಯಲ್ಲಿ 15,83,368 ಮತದಾರರು ಇದ್ದು 12,92,681 ಮತದಾರರ ಮ್ಯಾಪಿಂಗ್ ಆಗಿದ್ದು 2,90,687 ಮತದಾರರ ಮ್ಯಾಪಿಂಗ್ ಆಗಬೇಕಾಗಿದ್ದು ಶೇ 81.64 ಸಾಧನೆ ಮಾಡಲಾಗಿದೆ ಎಂದು ಅವರು ತಿಳಿಸಿದರು
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ. ಸಿ. ಶಿವನಂದಾಮೂರ್ತಿ, ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಪಾಂಡವಪುರ ಉಪ ವಿಭಾಗಧಿಕಾರಿ ಶ್ರಿನಿವಾಸ್ಅ ಹಾಗೂ ತಾಲ್ಲೂಕಿನ ತಹಶೀಲ್ದಾರ್ ಉಪಸ್ಥಿತರಿದ್ದರು.
BREAKING: ದಲಿತರ ಒಳ ಮೀಸಲಾತಿ ವಿಧೇಯಕಕ್ಕೆ ಕರ್ನಾಟಕ ರಾಜ್ಯಪಾಲರು ಅಂಕಿತ
Watch Video: ಕೇರಳದಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ: ಮೈ ಜುಂ ಎನ್ನುವ ವೀಡಿಯೊ ವೈರಲ್








