ದಾವಣಗೆರೆ : ಒಂದು ತಿಂಗಳು ಮಾಮೂಲಿ ಕೊಡದಿದ್ದಕ್ಕೆ ನನ್ನ ಪತಿಯನ್ನು ಪೊಲೀಸರು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಆದಿಲ್ ಪತ್ನಿ ಹೀನಾಬಾನು ಚನ್ನಗಿರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಮಟ್ಕಾ ಆಡುತ್ತಿದ್ದ ಎಂದು ಆರೋಪಿಸಿ ಚೆನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ನಿನ್ನೆ ಆದಿಲ್ಲನ್ನು ಠಾಣೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಠಾಣೆಯಲ್ಲಿ ಕುಸಿದುಬಿದ್ದು ಮತಪಟ್ಟಿದ್ದ ಈ ಒಂದು ಘಟನೆಗೆ ಸಂಬಂಧಿಸಿದಂತೆ ನನ್ನ ಗಂಡನನ್ನು ಪೊಲೀಸರೇ ಸಾಯಿಸಿದ್ದಾರೆ ಎಂದು ಮೃತ ಆದಿಲ್ ಪತ್ನಿ ಹೀನಾಬಾನು ಚನ್ನಗಿರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂಬ ಅನುಮಾನ ಇದೆ. ಆದ ಕಾರಣ ತನಿಖೆ ನಡೆಸಿ ನಮಗೆ ನ್ಯಾಯ ದೊರಕಿಸಿಕೊಡಿ. ಬೆಳಗ್ಗೆ ನನಗೆ ಮಾತನಾಡುವ ಧೈರ್ಯ ಇರಲಿಲ್ಲ. ನನಗೆ ಬಿಪಿ ಇದೆ ಎಂದು ಹೇಳುವ ಬದಲು ನನ್ನ ಮಗನಿಗೆ ಲೋ ಬಿಪಿ ಇದೆ ಎಂದು ತಪ್ಪು ಹೇಳಿದ್ದೇನೆ. ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ. ಈ ವಯಸ್ಸಲ್ಲಿ ನನಗೆ ದುಡಿಯೋಕೆ ಆಗುತ್ತಾ? ಸರ್ಕಾರ ನನಗೆ ಪರಿಹಾರ ಕೊಡಬೇಕು ಎಂದು ಮನವಿ ಮಾಡಿದರು.
ಆದಿಲ್ ಸಾವಿನ ಬಗ್ಗೆ ಒಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಕೆಲವರು ಲಾಕ್ ಅಪ್ ಡೆತ್ ಎಂದು ಆರೋಪ ಮಾಡುತ್ತಿದ್ದಾರೆ.ಕೆಲವರು ಲೋ ಬಿಪಿಯಿಂದ ಮೃತಪಟ್ಟಿದ್ದಾನೆ ಎಂದು ಹೇಳುತ್ತಿದ್ದಾರೆ. ವರದಿ ಬಂದ ಬಳಿಕ ಎಲ್ಲದಕ್ಕೂ ಉತ್ತರ ಸಿಗಲಿದೆ. ಠಾಣೆಯ ಬಳಿ ದಾಂದಲೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಆರೋಪಿಯನ್ನು ವಿಚಾರಣೆಗೆ ಕರೆದುಕೊಂಡು ಹೋದಾಗ ಸಾವು ಆಗಿದೆ ಉದ್ದೇಶಪೂರ್ವಕವಾಗಿ ಯಾರು ಏನು ಮಾಡಿಲ್ಲ ಎಂದು ಶಾಸಕ ಬಸವರಾಜ್ ಶಿವಗಂಗಾ ತಿಳಿಸಿದರು.