ಕಾಬೂಲ್ (ಅಫ್ಘಾನಿಸ್ತಾನ): ಅಫ್ಘಾನಿಸ್ತಾನದ ಝಬುಲ್ ಪ್ರಾಂತ್ಯದಲ್ಲಿ ಇಂದು ಮುಂಜಾನೆ ಟ್ರಾವೆಲರ್ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 48 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಶಹರ್-ಎ-ಸಫಾ ಜಿಲ್ಲೆಯಲ್ಲಿ ಇಂದು ಮುಂಜಾನೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. 48 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಾಂತೀಯ ಸಾರ್ವಜನಿಕ ಆರೋಗ್ಯ ಇಲಾಖೆಯ ನಿರ್ದೇಶಕ ಅಬ್ದುಲ್ ಹಕೀಮ್ ಹಕಿಮಿ ತಿಳಿಸಿದ್ದಾರೆ.
ಅಜಾಗರೂಕ ಚಾಲನೆ ಮತ್ತು ದಟ್ಟಣೆಯ ರಸ್ತೆಗಳಿಂದಾಗಿ ಅಫ್ಘಾನಿಸ್ತಾನದಲ್ಲಿ ಆಗಾಗ್ಗೆ ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸುತ್ತವೆ ಎಂದು ಸಂಚಾರ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
Big news: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ವಜಾ | Lakhimpur Kheri violence case
ಕುಟುಂಬಸ್ಥರ ಇಚ್ಛೆಗೆ ವಿರುದ್ಧ ಮದುವೆ: ಅಳಿಯ-ಮಗಳನ್ನು ಕೊಚ್ಚಿ ಕೊಲೆಗೈದ ವ್ಯಕ್ತಿ
BIGG NEWS : ತಮಿಳುನಾಡಿನ ಮದುರೈ ದೇವಾಲಯದಲ್ಲಿ ʻ ಹಿಂಸಾತ್ಮಕ ಘರ್ಷಣೆ ʼ : 10 ಮಂದಿಗೆ ʻ ಗಂಭೀರ ಗಾಯ ʼ | Tamil Nadu