ಕೊಟ್ಟಾಯಂ: ಕೇರಳದ ಕೊಟ್ಟಾಯಂ ಜಿಲ್ಲೆಯ ಮೀನಾಚಿಲ್ ಪಂಚಾಯಿತಿ ವ್ಯಾಪ್ತಿಯ ಖಾಸಗಿ ಜಮೀನಿನಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ ಎಂದು ಕೊಟ್ಟಾಯಂ ಜಿಲ್ಲಾಧಿಕಾರಿ ಡಾ.ಪಿ.ಕೆ.ಜಯಶ್ರೀ ತಿಳಿಸಿದ್ದಾರೆ.
ಕೊಟ್ಟಾಯಂದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದ ಅವರು, ರೋಗ ದೃಢಪಟ್ಟಿರುವ ಜಮೀನಿನಲ್ಲಿ ಹಂದಿಗಳನ್ನು ಕೊಂದು ಹೂತಿಡುವಂತೆ ಪಶುಸಂಗೋಪನಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
10 ಕಿ.ಮೀ ಕಣ್ಗಾವಲು ಘೋಷಣೆ: ಇಲ್ಲಿಯವರೆಗೆ 48 ಹಂದಿಗಳನ್ನು ಕೊಂದು ಹೂಳಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು,. ರೋಗ ದೃಢಪಟ್ಟಿರುವ ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಕಿಲೋಮೀಟರ್ ವರೆಗಿನ ಪ್ರದೇಶವನ್ನು ಸೋಂಕಿತ ಪ್ರದೇಶ ಎಂದು ಮತ್ತು ಹತ್ತು ಕಿಲೋಮೀಟರ್ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯವೆಂದು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸರಕಾರಕ್ಕೆ ಮಾಹಿತಿ ನೀಡಿದ್ದಾರೆ.
ಹಂದಿ ಮಾಂಸ ಸಾಗಣೆಗೆ ತಡೆ : ಪೀಡಿತ ಪ್ರದೇಶದಲ್ಲಿ ಹಂದಿ ಮಾಂಸ ಮಾರಾಟ ಅಂಗಡಿಗಳನ್ನು ಮುಚ್ಚುವುದು ಮತ್ತು ಅಲ್ಲಿಂದ ಇತರ ಪ್ರದೇಶಗಳಿಗೆ ಹಂದಿಗಳು, ಹಂದಿ ಮಾಂಸ ಮತ್ತು ಮೇವು ಸಾಗಣೆ ತಡೆ ಸೇರಿದಂತೆ ನಾನಾ ಕ್ರಮಗಳು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ವಯನಾಡು :ಕೆಲವು ತಿಂಗಳ ಹಿಂದೆ ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳ ಕೆಲವು ಜಮೀನುಗಳಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿತ್ತು.