ತಿರುವನಂತಪುರಂ: ಕೇರಳದ ವಯನಾಡು ಜಿಲ್ಲೆಯ ಮನಂತವಾಡಿಯ ಎರಡು ಫಾರ್ಮ್ಗಳಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಭೋಪಾಲ್ನಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ನಲ್ಲಿ ಮಾದರಿಗಳನ್ನು ಪರೀಕ್ಷಿಸಿದ ನಂತರ ಜಿಲ್ಲೆಯ ಎರಡು ಫಾರ್ಮ್ಗಳ ಹಂದಿಗಳಲ್ಲಿ ರೋಗ ದೃಢಪಟ್ಟಿದೆ.
ಫಾರ್ಮ್ ಒಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಪರೀಕ್ಷಾ ಫಲಿತಾಂಶದಲ್ಲಿ ಹಂದಿಗಳಲ್ಲಿ ಆಫ್ರಿಕನ್ ಸೋಂಕು ದೃಢಪಟ್ಟಿದೆ. ಎರಡನೇ ಫಾರ್ಮ್ 300 ಹಂದಿಗಳನ್ನು ಕೊಲ್ಲಲು ನಿರ್ದೇಶನಗಳನ್ನು ನೀಡಲಾಗಿದೆ. ಇದರ ಜೊತೆಗೆ ರೋಗ ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬಿಹಾರ ಮತ್ತು ಕೆಲವು ಈಶಾನ್ಯ ರಾಜ್ಯಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಕೇಂದ್ರದ ಎಚ್ಚರಿಕೆಯ ನಂತರ ರಾಜ್ಯವು ಈ ತಿಂಗಳ ಆರಂಭದಲ್ಲಿ ಜೈವಿಕ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಿತ್ತು.
ಆಫ್ರಿಕನ್ ಹಂದಿ ಜ್ವರವು ದೇಶೀಯ ಹಂದಿಗಳ ಮೇಲೆ ಪರಿಣಾಮ ಬೀರುವ ಅತ್ಯಂತ ಸಾಂಕ್ರಾಮಿಕ ಮತ್ತು ಮಾರಣಾಂತಿಕ ವೈರಲ್ ಕಾಯಿಲೆಯಾಗಿದೆ.
ಬೋಸ್ಟನ್: ಸೇತುವೆಯ ಮೇಲೆ ಬೆಂಕಿಯಿಂದ ಧಗಧಗಿಸಿದ ರೈಲು, ನದಿಗೆ ಹಾರಿದ ಮಹಿಳೆ… Video