ಕೋಲಾರ : ಅಸಹಜ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಜೆಡಿಎಸ್ MLC ಸೂರಜ್ ರೇವಣ್ಣ ಅವರು ನಿನ್ನೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಅವರು ತಾಯಿ ಭವಾನಿ ರೇವಣ್ಣ ಅವರೊಂದಿಗೆ ಕುರುಡುಮಲೆ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಹೌದು ಭವಾನಿ ರೇವಣ್ಣ ಹಾಗೂ ಪುತ್ರ ಸೂರಜ್ ರೇವಣ್ಣ ತಾಲೂಕಿನ ಕುರುಡುಮಲೆ ವಿನಾಯಕ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ತಿಂಗಳಿಗೊಮ್ಮೆ ನಡೆಯುವ ಸಂಕಷ್ಟ ಚತುರ್ಥಿಯಂದು ಸೂರಜ್ ರೇವಣ್ಣ ಈ ದೇವಸ್ಥಾನಕ್ಕೆ ಬಂದು ಹೋಮ ಹವನ, ಮಹಾ ಮಂಗಳಾರತಿ, ಅಭಿಷೇಕ, ವಿಶೇಷ ಪೂಜೆಸಲ್ಲಿಸುವ ಸಂಪ್ರದಾಯ ಮುಂದುವರೆಸಿಕೊಂಡು ಬರುತ್ತಿದ್ದಾರೆ.
ಕಳೆದ ಜೂನ್ ಒಂದು ತಿಂಗಳು ಪೂರ್ತಿ ಜೈಲು ಸೇರಿದ್ದರಿಂದ ಅವರಿಗೆ ದೇವಸ್ಥಾನಕ್ಕೆ ಆಗಮಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ನಿನ್ನೆ ಜೈಲಿನಿಂದ ಬಿಡುಗಡೆಯಾದ ಬಳಿಕ ತಾಯಿ ಭವಾನಿ ರೇವಣ್ಣ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದರು. ನ್ಯಾಯಾಲಯದಿಂದ ಬೇಲ್ ಸಿಕ್ಕಿದ ಮೇಲೆ ತಾಯಿಯೊಂದಿಗೆ ದೇವಸ್ಥಾನಕ್ಕೆ ಬಂದು ಎಂದಿನಂತೆ ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.