ಪಂಜಾಬ್ : ಇತ್ತಿಚೆಗೆ ಕೆನಡಾದಲ್ಲಿ ನಡೆದ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ಬಟಿಂಡಾದ ಸಾರ್ವಜನಿಕ ಉದ್ಯಾನವನದಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಾತ್ಮಾ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ.
ಗಾಂಧಿಯವರ ಪ್ರತಿಮೆಯು ರಮ್ಮನ್ ಮಂಡಿಯ ಸಾರ್ವಜನಿಕ ಉದ್ಯಾನವನದಲ್ಲಿತ್ತು. ಪ್ರತಿಮೆಯನ್ನು ಧ್ವಂಸಗೊಳಿಸಿದ ನಂತರ, ಅಪರಿಚಿತ ದುಷ್ಕರ್ಮಿಗಳು ಅದರ ಮುಖವನ್ನು ತೆಗೆದುಕೊಂಡು ಹೋಗಿದ್ದಾರೆ.
ಈ ಬಗ್ಗೆ ರಾಮ್ಮನ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಟೇಷನ್ ಹೌಸ್ ಆಫೀಸರ್ (ಸದರ್) ಹರ್ಜೋತ್ ಸಿಂಗ್ ಮಾನ್ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದು, ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ವಿಧ್ವಂಸಕ ಕೃತ್ಯವನ್ನು ಸ್ಥಳೀಯರು ತೀವ್ರವಾಗಿ ಖಂಡಿಸಿದ್ದಾರೆ. ಜಿಲ್ಲಾ ನಗರ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಸಿಂಗ್ಲಾ ಅವರು ಅಪರಾಧದ ಹಿಂದಿರುವವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು.