ನವದೆಹಲಿ : ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಸುವ ಸಾಧ್ಯತೆಯಿದೆ ಎಂದು ಜಾರಿ ನಿರ್ದೇಶನಾಲಯ ಶನಿವಾರ ನ್ಯಾಯಾಲಯಕ್ಕೆ ತಿಳಿಸಿದೆ.
ಮಹಾರಾಷ್ಟ್ರ ಗಡಿವಿವಾದ: ಕಾನೂನು ಹೋರಾಟಕ್ಕೆ ಸಕಲ ಸಿದ್ಧತೆ – ಸಿಎಂ ಬಸವರಾಜ ಬೊಮ್ಮಾಯಿ
ಇಂಡೋಸ್ಪಿರಿಟ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸಮೀರ್ ಮಹೇಂದ್ರು ಅವರ ಬಂಧನದ ನಂತರ 60 ದಿನಗಳ ಶಾಸನಬದ್ಧ ಅವಧಿ ನಾಳೆ ಮುಕ್ತಾಯಗೊಳ್ಳಲಿರುವುದರಿಂದ ಅವರ ವಿರುದ್ಧ ಮಾತ್ರ ಆರೋಪಪಟ್ಟಿ ಸಲ್ಲಿಸಲಾಗುವುದು. ಪ್ರಕರಣದ ಇತರ ಬಂಧಿತ ಆರೋಪಿಗಳ ವಿರುದ್ಧ ಪೂರಕ ಆರೋಪಪಟ್ಟಿಗಳನ್ನು ನಂತರ ಸಲ್ಲಿಸಲಾಗುವುದು ಎಂದು ತನಿಖಾ ಸಂಸ್ಥೆಯ ಅಧಿಕಾರಿಗಳು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಆರಂಭಿಕ ಆರೋಪಪಟ್ಟಿ ಸುಮಾರು 3,000 ಪುಟಗಳನ್ನು ಹೊಂದಿದೆ ಎಂದು ಅಧಿಕಾರಿಗಳು ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರಿಗೆ ಮಾಹಿತಿ ನೀಡಿದರು. ಇದೇ ವೇಳೆ ನ್ಯಾಯಾಲಯವು ರಿಜಿಸ್ಟ್ರಿಯಲ್ಲಿ ಆರೋಪಪಟ್ಟಿ ಸಲ್ಲಿಸಲು ಇಡಿಗೆ ಸೂಚಿಸಿತು.
ED files its first prosecution complaint (Chargesheet) in a money laundering case revolving around Delhi excise policy case. ED informs court that it contains approx 3,000 pages. It's been filed against businessman Sameer Mahendru as 60-day mandatory period was getting over today pic.twitter.com/cE6kNs3wwO
— ANI (@ANI) November 26, 2022
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಕ್ಯಾಬಿನೆಟ್ ಕೋವಿಡ್ ಸಮಯದಲ್ಲಿ ಮಧ್ಯ ಅಬಕಾರಿ ನೀತಿಯನ್ನು ಅಂಗೀಕರಿಸಿದ್ದು, ಗರಿಷ್ಠ ಆದಾಯವನ್ನು ಗಳಿಸುವ ಹಾಗೂ ನಕಲಿ ಮದ್ಯ ಅಥವಾ ಸುಂಕ ರಹಿತ ಮದ್ಯದ ಮಾರಾಟವನ್ನು ರಾಷ್ಟ್ರ ರಾಜಧಾನಿಯಲ್ಲಿ ನಿರ್ಮೂಲನೆ ಮಾಡುವುದು ಮುಖ್ಯ ಉದ್ದೇಶವಾಗಿತ್ತು.
ಪ್ರಕರಣದ ನಂತರ, ರಾಷ್ಟ್ರ ರಾಜಧಾನಿಯ ವಿವಿಧ ಸ್ಥಳಗಳಲ್ಲಿ ಮತ್ತು ದೇಶದ ಇತರ ಭಾಗಗಳಲ್ಲಿ ಅನೇಕ ದಾಳಿಗಳನ್ನು ನಡೆಸಲಾಯಿತು. ದೆಹಲಿಯ ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಎಲ್-ಜಿ ವಿನಯ್ ಕುಮಾರ್ ಸಕ್ಸೇನಾ ಶಿಫಾರಸು ಮಾಡಿದ ನಂತರ ಮದ್ಯದ ಯೋಜನೆಯು ಸ್ಕ್ಯಾನರ್ ಅಡಿಯಲ್ಲಿ ಬಂದಿತು.
ಕಳೆದ ವರ್ಷ ನವೆಂಬರ್ 17 ರಂದು ಜಾರಿಗೊಳಿಸಲಾದ ದೆಹಲಿ ಅಬಕಾರಿ ನೀತಿಯನ್ನು ಅರವಿಂದ್ ಕೇಜ್ರಿವಾಲ್ ಸರ್ಕಾರವು ಅದರ ಅನುಷ್ಠಾನದ ಬಗ್ಗೆ ಸಿಬಿಐ ತನಿಖೆಯ ನಂತರ ಜುಲೈನಲ್ಲಿ ರದ್ದುಗೊಳಿಸಿತು. ಆಪಾದಿತ ಹಗರಣದಲ್ಲಿ ಹಣದ ಜಾಡು ಹಿಡಿದಿರುವ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ.
ದೆಹಲಿಯ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೇಂದ್ರೀಯ ತನಿಖಾ ದಳ (ಸಿಬಿಐ) ಮೊದಲ ಚಾರ್ಜ್ಶೀಟ್ನಲ್ಲಿ ಸಲ್ಲಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ನಲ್ಲಿ ಉಲ್ಲೇಖಿಸಲಾದ ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೆಸರನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿಲ್ಲ ಎಂದು ತಿಳಿದು ಬಂದಿದೆ,
ಚಾರ್ಜ್ಶೀಟ್ನಲ್ಲಿ ಎಎಪಿಯ ಸಂವಹನ ಮುಖ್ಯಸ್ಥ ಮತ್ತು ಸಿಸೋಡಿಯಾ ಅವರ ಆಪ್ತ ಸಹಾಯಕ ವಿಜಯ್ ನಾಯರ್ ಮತ್ತು ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋನಪಲ್ಲಿ ಸೇರಿದಂತೆ ಏಳು ಆರೋಪಿಗಳನ್ನು ಹೆಸರಿಸಲಾಗಿದೆ.
BIGG NEWS: ವೋಟ್ ಐಡಿ ಪರಿಷ್ಕರಣೆ ಅಕ್ರಮ; ವೋಟ್ ಕಳ್ಳತನ ನೋಟ್ ಪ್ರಿಂಟ್ ಮಾಡಿದ್ದಷ್ಟೇ ಅಪರಾಧ: ಡಿಕೆ ಶಿವಕುಮಾರ್