ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ನಟ ದರ್ಶನ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರ ಜೊತೆಗೆ ಪ್ರಮುಖ ಆರೋಪಿ ಪವಿತ್ರಗೌಡ, ಪ್ರದೋಷ ಸೇರಿದಂತೆ ಎಲ್ಲಾ 7 ಆರೋಪಿಗಳು ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ ದರ್ಶನ್ ಅರೆಸ್ಟ್ ಆದ ಎರಡು ದಿನ ಬಳಿಕ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್ ಹಾಕಿದ್ದಾರೆ.
ಹೌದು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ರೇಣುಕಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿ ದರ್ಶನ್ ಜೈಲಿನಲ್ಲಿದ್ದಾರೆ ಕೊಲೆ ಆರೋಪಿ ದರ್ಶನ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್ ಹಾಕಿದ್ದಾರೆ. ದರ್ಶನ್ ಅರೆಸ್ಟ್ ಆಗಿ ಎರಡು ದಿನದ ಬಳಿಕ ನಟಿ ವಿಜಯಲಕ್ಷ್ಮಿ ಪೋಸ್ಟ್ ಹಾಕಿದ್ದಾರೆ ಒಡೆದ ಹೃದಯದ ಪೋಸ್ಟ್ ಹಾಕಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮನೋವು ತೋಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮಿ ಈ ರೀತಿ ಭಾವುಕರಗಿ ಪೋಸ್ಟ್ ಹಾಕಿದ್ದಾರೆ.