ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಸಿದಂತೆ ಪ್ರಕರಣವನ್ನು CBI ತನಿಖೆಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅವರು ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ CBI ತನಿಖೆ ಅವಶ್ಯಕತೆ ಇಲ್ಲ ಎಂದು ಹೇಳಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ವಜಾಗೊಳಿಸಿದೆ.ಹೈಕೋರ್ಟ್ ಈ ಆದೇಶದ ಕುರಿತು ಪ್ರತಿಕ್ರಿಯೆ ನೀಡಿದ ಸ್ನೇಹಮಯಿ ಕೃಷ್ಣ ಅವರು ಕೋರ್ಟ್ ನ ಆದೇಶದ ಪ್ರತಿ ಸಿಕ್ಕಿದ ಕೂಡಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಹೌದು ಮುಡಾ ತನಿಖೆಯನ್ನು ಸಿಬಿಐಗೆ ತನಿಖೆಗೆ ವಹಿಸಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತಾಗಿ ಮಾಧ್ಯಮಗಳಿಗೆ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ತನಿಖೆಯ ಬಗ್ಗೆ ನಮಗೆ ನಂಬಿಕೆ ಇಲ್ಲ. ಹೈ ಕೋರ್ಟ್ ಆದೇಶದ ಪ್ರತಿ ಸಿಕ್ಕಕೊಡಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದರು.
ಇಂದಿನ ವಿಚಾರಣೆ ವೇಳೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಸಿಎಂ ವಿರುದ್ಧದ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಲು ನಕಾರ ವ್ಯಕ್ತಪಡಿಸಿದ್ದು, ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ. ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.