ಶ್ರೀನಗರ: ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಪಕ್ಷಕ್ಕೆ ಗುಡ್ ಬೈ ಹೇಳಿದ ಬೆನ್ನಲ್ಲೇ ಜಮ್ಮು- ಕಾಶ್ಮೀರದಲ್ಲಿ ಹಲವು ಕಾಂಗ್ರೆಸ್ ನಾಯಕರ ರಾಜೀನಾಮೆ ನೀಡಲು ಆರಂಭವಾಗಿದ್ದು, ಮಾಜಿ ಸಚಿವ ಆರ್ ಎಸ್ ಚಿಬ್ ಸೇರಿ 5 ಕಾಂಗ್ರೆಸ್ ನಾಯಕರು ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
BIG NEWS: ಶೀಘ್ರವೇ ಕಾಂಗ್ರೆಸ್ ಗೆ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಗುಡ್ ಬೈ, ಬಿಜೆಪಿ ಸೇರ್ಪಡೆ.?!
ಪ್ರಮುಖವಾಗಿ ಆಜಾದ್, ತಮ್ಮ ರಾಜೀನಾಮೆಗೆ ರಾಹುಲ್ ಗಾಂಧಿಯೇ ಕಾರಣ ಎಂದು ಸೋನಿಯಾ ಗಾಂಧಿಗೆ ಪತ್ರವನ್ನೂ ಬರೆದಿದ್ದು, ರಾಹುಲ್ ಗಾಂಧಿಯವರ ಕಟು ಟೀಕೆಯೊಂದಿಗೆ ಇಂದು ಕಾಂಗ್ರೆಸ್ ತೊರೆದಿರುವ ಗುಲಾಂ ನಬಿ ಆಜಾದ್ ಜಮ್ಮು ಕಾಶ್ಮೀರದಲ್ಲಿ ಹೊಸ ಪಕ್ಷವನ್ನು ಪ್ರಾರಂಭಿಸುವ ಸಾಧ್ಯತೆಯಿದೆ.
BIG NEWS: ಶೀಘ್ರವೇ ಕಾಂಗ್ರೆಸ್ ಗೆ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಗುಡ್ ಬೈ, ಬಿಜೆಪಿ ಸೇರ್ಪಡೆ.?!
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯಾಗಿರುವ ಗುಲಾಂ ನಬಿ ಆಜಾದ್ ತಮ್ಮ ತವರು ನೆಲದಲ್ಲಿ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಲು ಬಯಸಿದ್ದಾರೆ ಎನ್ನುವ ಊಹಾಪೋಹಗಳ ನಡುವೆಯೇ ಹಲವು ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.
J&K | Senior Congress Leader & Former Minister RS Chib resigns from Primary membership of Congress soon after the resignation of Ghulam Nabi Azad pic.twitter.com/HPFgfb886W
— ANI (@ANI) August 26, 2022
J&K | GM Saroori, Haji Abdul Rashid, Mohd Amin Bhat, Gulzar Ahmad Wani and Choudhary Mohd Akram resign from the primary membership of Congress "in support of Ghulam Nabi Azad". pic.twitter.com/PciPTd3QS3
— ANI (@ANI) August 26, 2022
ಮಾಜಿ ಸಚಿವ ಆರ್ ಎಸ್ ಚಿಬ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ GM ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್ “ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ” ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
BIG NEWS: ಶೀಘ್ರವೇ ಕಾಂಗ್ರೆಸ್ ಗೆ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ಗುಡ್ ಬೈ, ಬಿಜೆಪಿ ಸೇರ್ಪಡೆ.?!