ನವದೆಹಲಿ: ಕರ್ನಾಟಕ ಸರ್ಕಾರವು ನೀಟ್ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ. ಈ ಬೆನ್ನಲ್ಲೇ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲೂ ನೀಟ್ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ.
ನ್ಯಾಷನಲ್ ಟೆಸ್ಟ್ ಏಜೆನ್ಸಿ ನಡೆಸುವಂತ ನೀಟ್ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಪ್ರಶ್ನೆಪತ್ರಿಕೆ ಸೋರಿಯ ನಂತ್ರ, ಕೇಂದ್ರ ಸರ್ಕಾರದಿಂದ ಸಿಬಿಐ ತನಿಖೆಗೆ ಪ್ರಕರಣವನ್ನು ವಹಿಸಲಾಗಿತ್ತು.
ಕೇಂದ್ರ ಸರ್ಕಾರದ ಬಹು ದೊಡ್ಡ ಪರೀಕ್ಷಾ ಹಗರಣವೆಂದೇ ಕರೆಯುತ್ತಿರುವಂತ ನೀಟ್ ಉತ್ತರ ಪತ್ರಿಕೆ ಬಹಿರಂಗ ಪ್ರಕರಣದ ಸಂಬಂಧ ರಾಜ್ಯ ಸರ್ಕಾರಗಳು ಸಿಡಿದೆದ್ದಿದ್ದವು. ಈ ಪರೀಕ್ಷೆಯನ್ನೇ ವಿರೋಧಿಸುವಂತ ನಡೆಯುನ್ನು ತೋರಿದ್ದವು.
ಕರ್ನಾಟಕ ಮೊದಲ ಬಾರಿಗೆ ನೀಟ್ ವಿರುದ್ಧದ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಈಗ ಪಶ್ಚಿಮ ಬಂಗಾಳದಲ್ಲೂ ವಿಧಾನಸಭೆಯಲ್ಲೇ ನೀಟ್ ವಿರುದ್ಧದ ನಿರ್ಣಯಕ್ಕೆ ಅಂಗೀಕಾರವನ್ನು ಪಡೆಯಲಾಗಿದೆ.
ಒಟ್ಟಾರೆಯಾಗಿ ಕರ್ನಾಟಕದ ನಂತರ, ಪಶ್ಚಿಮ ಬಂಗಾಳ ವಿಧಾನಸಭೆಯು ರಾಜ್ಯದಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (National Eligibility-cum-Entrance Test -NEET) ಅನ್ನು ರದ್ದುಗೊಳಿಸುವ ನಿರ್ಣಯವನ್ನು ಅಂಗೀಕರಿಸಿತು. ಅದರ ಬದಲಿಗೆ ವೈದ್ಯಕೀಯ ಅಧ್ಯಯನವನ್ನು ಮುಂದುವರಿಸಲು ಬಯಸುವ ವಿದ್ಯಾರ್ಥಿಗಳಿಗೆ ಹೊಸ ಪ್ರವೇಶ ಪರೀಕ್ಷೆಯನ್ನು ಜಾರಿಗೆ ತರಲಿದೆ.
ನಾನು ಯಾವುದೇ ಕಾರಣಕ್ಕೆ ‘ನಟ ದರ್ಶನ್’ ಕೇಸಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಗ್ರಾಮಠಾಣ’ ಒಳಗಿನ, ಹೊರಗಿನ ‘ಆಸ್ತಿ ಅಳತೆ’ಗೆ ಅವಕಾಶ