ಬೆಂಗಳೂರು : ಪೆಟ್ರೋಲ್ ಡೀಸೆಲ್ ಹಾಗೂ ಹಾಲಿನ ದರ ಏರಿಕೆಯಾದ ಬಳಿಕ ಇದೀಗ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಪೆಟ್ರೋಲ್, ಗ್ಯಾಸ್ ಬೆಲೆ ಹೆಚ್ಚಾಳವಾಗಿದ್ದರಿಂದ ಆಟೋ ಪ್ರಯಾಣ ದರ ಪರಿಷ್ಕರಣೆಗೆ ಆಟೋ ಚಾಲಕರ ಮತ್ತು ಮಾಲೀಕರ ಸಂಘಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದು, ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿವೆ.
ಹೌದು ಈ ಕುರಿತು ಪ್ರತಿಕ್ರಿಯಿಸಿರುವ ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜು ನಾಥ್, 2021ರ ಡಿಸೆಂಬರ್20ರಿಂದ ಆಟೋ ಪ್ರಯಾಣ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಈ ಕೂಡಲೇ ಆಟೋ ಪ್ರಯಾಣ ದರ ಹೆಚ್ಚಿಸು ವಂತೆ ಒತ್ತಾಯಿಸಿವೆ. ಸದ್ಯ ಕನಿಷ್ಠ ಆರಂಭದ 2 ಕಿ.ಮೀ. ಪ್ರಯಾಣ ರೂ.30 ಇದ್ದು, ಅದನ್ನು ರೂ.40ಕ್ಕೆ ಹೆಚ್ಚಿಸಬೇಕು. ಪ್ರತಿ 2 ಕಿ. ಮೀ. ನಂತರದ ಪ್ರಯಾಣ ದರವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆಸಾರಿಗೆ ಇಲಾಖೆಗೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಆದರೆ, ಈವರೆಗೆ ಕ್ರಮ ಕೈಗೊಂಡಿಲ್ಲ. ಬಿಡಿ ಭಾಗಗಳು, ಗ್ಯಾಸ್, ಪೆಟ್ರೋಲ್ ಬೆಲೆಗಳು ಹೆಚ್ಚಾಗಿದೆ. ಆಟೋ ರಿಕ್ಷಾ ದರವೂ ಹೆಚ್ಚಾಗಿದ್ದು, ಚಾಲಕರು ಮತ್ತು ಮಾಲೀಕರು ಆರ್ಥಿಕ ಹೊರೆಗೆ ಸಿಲುವಂ ತಾಗಿದೆ. ಹೀಗಾಗಿ ಶೀಘ್ರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳ ಮಾಡಲು ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.