ಬೆಂಗಳೂರು : ನಮ್ಮ ತಂದೆ ರಾಜಕೀಯದ ಕೊನೆಯ ಹಂತದಲ್ಲಿ ಇದ್ದಾರೆ. ಹಾಗಾಗಿ ಒಳ್ಳೆಯ ಮಾರ್ಗದರ್ಶನ ಹಾಗೂ ರಾಜಕೀಯ ಸೈದಾಂತಿಕದಿಂದ ಸಚಿವ ಸತೀಶ್ ಜಾರಕಿಹೊಳಿ ನಮ್ಮನ್ನೆಲ್ಲಾ ಮುನ್ನಡೆಸಲಿದ್ದಾರೆ ಎಂದು ಪರೋಕ್ಷವಾಗಿ ಮುಂದಿನ ಸಿಎಂ ಸಚಿವ ಸತೀಶ್ ಜಾರಕಿಹೊಳಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.
ಇನ್ನೊಂದು ಕಡೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದರ ಮಧ್ಯ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ ಹಿಂದು ನಾಯಕತ್ವದ ದಾಳ ಉರುಳಿಸಿದ್ದಾರೆ ಈ ಮೂಲಕ ನವೆಂಬರ್ ನಲ್ಲಿ ಭಾರಿ ದೊಡ್ಡ ಕ್ರಾಂತಿ ಅಗಲಿದೆ ಎನ್ನುವುದರ ಕುರಿತು ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ.
ಇದರ ಮಧ್ಯ ಅಹಿಂದ ನಾಯಕತ್ವದ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ಸಚಿವ ಪ್ರಿಯಾಂಕ ಖರ್ಗೆ ಅಭಿಮಾನಿಗಳು ಸಿಎಂ ಸಿದ್ದರಾಮಯ್ಯ ಬಳಿಕ ಮುಂದಿನ ಮುಖ್ಯಮಂತ್ರಿ ಪ್ರಿಯಾಂಕ ಖರ್ಗೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಂತರ ಅಹಿಂದ ನಾಯಕರು ಯಾರು? ಉತ್ತರ ಈಗ ಸಿಕ್ಕಿದೆ ಅದುವೇ ಪ್ರಿಯಾಂಕ ಖರ್ಗೆ ಅಂತ ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯನವರ ಸೈದ್ಧಾಂತಿಕತೆ ಮುನ್ನಡೆಸಬಲ್ಲ ನಾಯಕ ಪ್ರಿಯಾಂಕ ಖರ್ಗೆ ಎಂದು ಪೋಸ್ಟ್ ವೈರಲ್ ಆಗಿದೆ.