ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಇನ್ನೂ ಕೋರ್ಟ್ ನಲ್ಲಿದೆ. ಇದರ ಮಧ್ಯ ರಾಜ್ಯ ಭೋವಿ ನಿಗಮದಲ್ಲಿ ಕೂಡ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ನಿಗಮದಲ್ಲಿ ನಡೆದಂತಹ ಅಕ್ರಮ ಹಗರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಹಾಗೂ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗಳಿಸಿದ್ದು, ಇದೀಗ ಹಗರಣದ ಕಿಂಗ್ ಪಿನ್ ಗಳನ್ನು ಸಿಐಡಿ ಮತ್ತು ಎಸ್ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.
ಹೌದು ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ಮುಂದುವರೆಸಿರುವ ಅಪರಾಧ ತನಿಖಾ ಇಲಾಖೆ (ಸಿಐಡಿ), ಆ ನಿಗಮದಿಂದ ಇತ್ತೀಚಿಗೆ ಆತ್ಮ ಹತ್ಯೆ ಮಾಡಿಕೊಂಡ ಉದ್ಯಮಿಗೆ ಸೇರಿದ್ದು ಎನ್ನಲಾದ ಕಂಪನಿ ಸೇರಿ ಒಟ್ಟು 5 ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ 34 ಕೋಟಿ ರೂಪಾಯಿ ವರ್ಗಾವಣೆಯಾಗಿ ರುವುದನ್ನು ಪತ್ತೆ ಹಚ್ಚಿದೆ.
ಇದೇ ಹಗರಣ ಸಂಬಂಧ ಸಿಐಡಿ ತನಿಖೆ ಎದುರಿಸಿದ್ದ ಉದ್ಯಮಿ ಜೀವಾ ಅವರು, 5 ದಿನಗಳ ಹಿಂದೆ ಬೆಂಗಳೂರಿನ ಪದ್ಮನಾಭನಗರದ ರಾಘವೇಂದ್ರ ಲೇಔಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ಅಕ್ರಮ ಹಣ ವರ್ಗಾವಣೆ ಶೋಧಿಸಿರುವ ಸಿಐಡಿ, ಜಿಎಂ ಮನೆ ಬಾಡಿಗೆದಾರರು, ನಿಗಮದ ಮಾಜಿ ಜಿಎಂ ಬಿ.ಕೆ.ನಾಗರಾಜಪ ಮನೆಯಲ್ಲಿ ಉದ್ಯಮಿ ಜೀವಾ ಹಾಗೂ ಆಕೆಯ ಸೋದರಿ ಸಂಗೀತಾ ಮನೆಯಲ್ಲಿ ಬಾಡಿಗೆಯಲ್ಲಿ ದ್ದರು.
ಭೋವಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಎ ತನಿಖೆಯ ವೇಳೆ ಬ್ರಹ್ಮಾಂಡ ಬ್ರಷ್ಟಾಚಾರದ ಮತ್ತಷ್ಟು ಅಂಶಗಳು ಬಯಲಾಗಿದೆ. ಭೋವಿ ನಿಗಮದ ಹಣ ದುರ್ಬಳಕೆಯ ಬಗ್ಗೆ ಸಿಐಡಿ ಹಾಗೂ ಎಸ್ಐಟಿ ತಂಡಗಳು ತನಿಖೆ ನಡೆಸುತ್ತಿವೆ ಹಗರಣದ ಕಿಂಗ್ ಪಿನ್ ಗಳನ್ನು ಸಿಐಡಿ ಮತ್ತು ಎಸ ಐ ಟಿ ತಂಡಗಳು ಪತ್ತೆ ಹಚ್ಚಿದೆ.
ಈ ಒಂದು ಭೋವಿ ನಿಗಮದ ಹಗರಣವೂ ವಾಲ್ಮೀಕಿ ನಿಗಮದ ಅವ್ಯವಹಾರವನ್ನು ಕೂಡ ಮೀರಿಸಿದೆ. ಭೋವಿ ಅಭಿವೃದ್ಧಿ ನಿಗದಲ್ಲಿ 90 ಕೋಟಿಗೂ ಅಧಿಕ ಅವ್ಯವಹಾರ ಆರೋಪ ಕೇಳಿ ಬಂದಿದೆ. ಭೋವಿ ಅಭಿವೃದ್ಧಿ ನಿಗಮದ ಹಣ ಸಿಬ್ಬಂದಿಯ ಸಂಬಂಧಿಕರ ಅಕೌಂಟಿಗೆ ಜಮೆ ಆಗಿದೆ ಎಂದು ಸಿಐಡಿ ತನಿಖೆ ವೇಳೆ ಬಯಲಾಗಿದೆ. ಸಿಐಡಿ ಮತ್ತು ಎಸ್ ಐ ಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತಷ್ಟು ತನಿಖೆಯನ್ನು ಚುರುಕುಗೊಳಿಸಿದ್ದಾರೆ.