ಚಿತ್ರದುರ್ಗ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಲಾಗಿತ್ತು. ಈ ಬೆನ್ನಲ್ಲೇ ಮತ್ತೆ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಇಂದು ಮತ್ತೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವಂತ ವೀರೇಂದ್ರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರು ಕಾರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಖಾಸಗಿ ಬ್ಯಾಂಕ್ ಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಇಂದು ಸಂಜೆ 7 ಗಂಟೆಯವರೆಗೆ ಶೋಧ ಕಾರ್ಯಾಚರಣೆಯನ್ನು ಇಡಿ ಅಧಿಕಾರಿಳು ನಡೆಸಿದರು. ಆ ಬಳಿಕ ಶಾಸಕ ವೀರೇಂದ್ರ ಪಪ್ಪಿ ಅವರ ನಿವಾಸದ ಮೇಲಿನ ದಾಳಿಯನ್ನು ಅಂತ್ಯಗೊಳಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
BREAKING: 1400 ಜನರ ಸಾವಿಗೆ ಕಾರಣವಾದ ಪ್ರಬಲ ಭೂಕಂಪದ ನಂತರ, ಅಫ್ಘಾನಿಸ್ತಾನದಲ್ಲಿ 5.5 ತೀವ್ರತೆಯಯಲ್ಲಿ ಮತ್ತೆ ಭೂಕಂಪ
ಶಿವಮೊಗ್ಗ: ಸಾಗರದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ, ಮನವಿ