ಬೆಂಗಳೂರು : ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಚಿವ ಬಿ.ಸಿ ನಾಗೇಶ್ ಮುಖ್ಯ ಮಾಹಿತಿ ನೀಡಿದ್ದು, ಒಂದನೇ ತರಗತಿಗೆ ಮಗು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು ಎಂದು ಸಚಿವರು ಮಾಹಿತಿ ನೀಡಿದ್ದಾರೆ,
ಈ ಕುರಿತು ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಒಂದನೇ ತರಗತಿಗೆ ಶಾಲೆಗೆ ಸೇರಿವುದಕ್ಕೆ ಮಗುವಿಗೆ 6 ವರ್ಷ ಪೂರ್ಣವಾಗುವುದು ಕಡ್ಡಾಯವಾಗಿದೆ . ಈ ನಿಯಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ ಎಂದರು.
ಈಗಾಗಲೇ ಇತರ 23 ರಾಜ್ಯಗಳಲ್ಲಿ ಈ ನಿಯಮ ಜಾರಿಗೆ ತರಲಾಗಿದ್ದು, ಕರ್ನಾಟಕದಲ್ಲಿ ಕೂಡ ಬರುವ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ. ಮಕ್ಕಳನ್ನು ಶಾಲೆಗೆ ಸೇರಿಸಲು 6 ವರ್ಷ ಕಡ್ಡಾಯವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕೊರೊನಾ ನಂತರ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದು, ಕಲಿಕೆ ಸಾಮರ್ಥ್ಯ ಹೆಚ್ಚಿಸಲು 5 ಹಾಗೂ 8 ನೇ ತರಗತಿಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಚಿಂತನೆ ಇದೆ , ಈ ಬಗ್ಗೆ ನಿರ್ಧರಿಸಿ ತೀರ್ಮಾನ ಮಾಡಲಾಗುತ್ತದೆ ಎಂದರು.