Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ನಿವೇಶನ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

​ಅಹಮದಾಬಾದ್‌ನಲ್ಲಿ ಕಲುಷಿತ ನೀರು ಸೇವನೆ: 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆತಂಕದಲ್ಲಿ ಸ್ಥಳೀಯರು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : `ಪೊಲೀಸ್ ಕಾನ್ ಸ್ಟೆಬಲ್’ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : `CM ಸಿದ್ದರಾಮಯ್ಯ’ ಘೋಷಣೆ
KARNATAKA

Good News : `ಪೊಲೀಸ್ ಕಾನ್ ಸ್ಟೆಬಲ್’ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : `CM ಸಿದ್ದರಾಮಯ್ಯ’ ಘೋಷಣೆ

By kannadanewsnow57

ಮೈಸೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡಿ ತೀರ್ಮಾನಿಸುತ್ತೇವೆ ಎಂದರು.

ಈ ಬಾರಿ ರಾಜ್ಯದಲ್ಲಿ 60,000 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ. ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಸಮಾಜದ ಶಾಂತಿಗೆ ಭಂಗವುಂಟುಮಾಡುವುದು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆಗೆ ಆದೇಶವಾಗಿದೆ, ಆದರೆ 2021 ಲೋಕಾಯುಕ್ತದವರು ತನಿಖೆ ಮಾಡಿಲ್ಲ. ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ನಮ್ಮ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ, ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆ. ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡುತ್ತಿಲ್ಲ. ಕುಮಾರಸ್ವಾಮಿಯವರು ಹಿಟ್ ಎಂಡ್ ರನ್ ಗಿರಾಕಿ, ಅವರು ತಮ್ಮ ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು ಎಂದು ತಿಳಿಸಿದ್ದಾರೆ.

Age limit for 'Police Constable' posts increased from 27 years to 33 years: CM Siddaramaiah Good News : `ಪೊಲೀಸ್ ಕಾನ್ ಸ್ಟೆಬಲ್' ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : `CM ಸಿದ್ದರಾಮಯ್ಯ' ಘೋಷಣೆ
Share. Facebook Twitter LinkedIn WhatsApp Email

Related Posts

GOOD NEWS : ನಿವೇಶನ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

1 Min Read

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

3 Mins Read

ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತದ ದುರಂತಕ್ಕೆ 1 ವರ್ಷ : 11 ಅಮಾಯಕ ಜೀವಗಳಿಗೆ `RCB’ ಟ್ರೋಫಿ ಅರ್ಪಣೆ.!

2 Mins Read
Recent News

GOOD NEWS : ನಿವೇಶನ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

​ಅಹಮದಾಬಾದ್‌ನಲ್ಲಿ ಕಲುಷಿತ ನೀರು ಸೇವನೆ: 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆತಂಕದಲ್ಲಿ ಸ್ಥಳೀಯರು!

Suryakumar Yadav

​ಟೀಮ್ ಇಂಡಿಯಾ ಟಿ20 ನಾಯಕತ್ವದ ರೇಸ್: ಸೂರ್ಯಕುಮಾರ್ ಯಾದವ್ ಉತ್ತರಾಧಿಕಾರಿಗಳಾಗಿ ಮೂವರು ಪ್ರಮುಖ ಸ್ಪರ್ಧಿಗಳು!

State News
KARNATAKA

GOOD NEWS : ನಿವೇಶನ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

By kannadanewsnow57 KARNATAKA 1 Min Read

ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0)…

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತದ ದುರಂತಕ್ಕೆ 1 ವರ್ಷ : 11 ಅಮಾಯಕ ಜೀವಗಳಿಗೆ `RCB’ ಟ್ರೋಫಿ ಅರ್ಪಣೆ.!

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.