ನವದೆಹಲಿ: ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೇ, ಅಧಿಕಾರಕ್ಕೆ ಬಂದ ಮರುಕ್ಷಣವೇ ಯುವಜನತೆಯ ಪಾಲಿಗೆ ಕಂಟಕವಾಗಿರುವಂತ ಅಗ್ನಿವೀರ ಸೇನಾ ನೇಮಕಾತಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ನೇಮಕಾತಿ ಪದ್ದತಿಯನ್ನು ಮರು ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕರು ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೂರು ಸೇನಾಪಡೆಗಳ ದಂಡನಾಯಕರಾಗಿರುವಂತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಯುವಜನರನ್ನು ತೊಂದರೆಗೆ ಸಿಲುಕಿಸುವ ಅಗ್ನಿಪಥ ಯೋಜನೆಯನ್ನು ಕೂಡಲೇ ರದ್ದುಗೊಳಿಸಬೇಕು. ಇದರಿಂದ ನಾಲ್ಕು ವರ್ಷಗಳ ಹೊರಬರುವ ಅಗ್ನಿವೀರರಿಗೆ ಮತ್ತೆ ಉದ್ಯೋಗ ಹುಡುಕುವುದು ಕಷ್ಟವಾಗುತ್ತದೆ ಎಂದಿದ್ದಾರೆ.
ಇದಷ್ಟೇ ಅಲ್ಲದೇ ಅಗ್ನಿಪಥ ಯೋಜನೆ ಘೋಷಣೆಗೂ ಮೊದಲು ಸೇನೆಗೆ ಆಯ್ಕೆಯಾಗಿದ್ದ 2 ಲಕ್ಷ ಮಂದಿಗೆ ಪ್ರಕ್ರಿಯೆಯನ್ನೇ ರದ್ದುಗೊಳಿಸಿರುವುದಾಗಿ ತಿಳಿಸಿ ಅತಂತ್ರಕ್ಕೆ ಸಿಲುಕಿಸಲಾಗಿದೆ. ಅವರಿಗೂ ಕೂಡಲೇ ನೇಮಕಾತಿ ಆದೇಶವನ್ನು ನೀಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಈ ಯೋಜನೆಗೆ ತಮ್ಮ ಸಹಮತವಿರಲಿಲ್ಲ ಎಂಬುದಾಗಿ ಮಾಜಿ ಸಶಸ್ತ್ರ ಪಡೆಗಳ ಮುಖ್ಯಸ್ಥರಾದ ಜ.ಮನೋಜ್ ನವಣೆ ಅವರೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಗ್ನಿವೀರ ಯೋಜನೆಯನ್ನು ರದ್ದುಗೊಳಿಸಿ, ಈ ಹಿಂದೆ ಇದ್ದಂತ ಸೇನಾ ನೇಮಕಾತಿಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ.
KAS Jobs: ‘384 ಕೆಎಎಸ್ ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ: ‘3 ವರ್ಷ’ ವಯೋಮಿತಿ ಸಡಿಲಿಕೆ