ಆಗಸ್ಟ್ 8 ರಿಂದ ರಾಯಚೂರು ಜಿಲ್ಲೆಯಲ್ಲಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿಗೆ ಕೊಪ್ಪಳ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಹಾಜರಾಗುವಂತೆ ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ದಾರಾಮೇಶ್ವರ ಅವರು ತಿಳಿಸಿದ್ದಾರೆ.
ಬೆಳಗಾವಿಯ ಸೇನಾ ನೇಮಕಾತಿ ಕಚೇರಿಯಿಂದ ಅಗ್ನಿವೀರ್ ನೇಮಕಾತಿಯಡಿ ರಾಜ್ಯದ ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ನೇಮಕಾತಿಗೆ ಸಂಬಂಧಿಸಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು www.joinindianarmy.nic.in ನಲ್ಲಿ ಪ್ರಕಟಿಸಲಾಗಿದ್ದು, ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಈಗಾಗಲೇ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ವೆಬ್ಸೈಟ್ನಲ್ಲಿ ತಮ್ಮ ಪ್ರವೇಶ ಪತ್ರವನ್ನು ಪಡೆದುಕೊಂಡು ಆಗಸ್ಟ್ 8 ರಿಂದ ಆ. 25ರ ವರೆಗೆ ರಾಯಚೂರು ಜಿಲ್ಲೆಯ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆಯುವ ಸೇನಾ ನೇಮಕಾತಿಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.