ಬೆಂಗಳೂರು : ದಿನಾಂಕ: 15-02-2025 ಭಾನುವಾರದಂದು “ಮಹಾ ಶಿವರಾತ್ರಿ ಹಬ್ಬ”ದ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 4445 ಬೀದಿ ಬದಿ ವ್ಯಾಪಾರಿಗಳ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆ : ಆರ್. ಲತಾ
ದಿನಾಂಕ:10.02.2026 ರಂದು ಬೆಂಗಳೂರು ನಗರ ಪಾಲಿಕೆಯ ಅಪರ ಆಯುಕ್ತರು (ಅಭಿವೃದ್ಧಿ) ಆರ್.ಲತಾ ರವರು ಯಲಹಂಕದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಸಾಂಕೇತಿಕವಾಗಿ 20 ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸುವ ಮೂಲಕ ಗುರುತಿನ ಚೀಟಿ ವಿತರಣಾ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅಪರ ಆಯುಕ್ತರು (ಅಭಿವೃದ್ಧಿ) ರವರು, ಬೀದಿಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಅಧಿನಿಯಮ 2014 ಮತ್ತು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರದ ನಿಯಂತ್ರಣ ಮತ್ತು ಪರವಾನಿಗೆ) ಯೋಜನೆ 2020 ರಂತೆ, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ದಿನಾಂಕ:20.09.2024 ರಿಂದ 06.01.2025 ರವರೆಗೆ ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಅಧಿನಿಯಮ 2019/20 ರ ಅಧ್ಯಾಯ-02 ರಂತೆ ಸಮೀಕ್ಷೆ ನಡೆಸಿ, ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 4445 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿರುತ್ತದೆ ಹಾಗೂ ಗುರುತಿಸಲಾಗಿರುವ ಎಲ್ಲಾ ಬೀದಿಬದಿ ವ್ಯಾಪಾರಿಗಳಿಗೆ ಅವರು ವ್ಯಾಪಾರ ನಡೆಸುತ್ತಿರುವ ಜಾಗಗಳಿಗೆ ತೆರಳಿ ಗುರುತಿನ ಚೀಟಿಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಜಂಟಿ ಆಯುಕ್ತರಾದ ಮೊಹಮ್ಮದ್ ನಯೀಮ್ ಮೊಮಿನ್, ಪಲ್ಲವಿ, ಉಪ ಆಯುಕ್ತರಾದ ಮಂಗಳ ಗೌರಿ, ಅಮರೇಗೌಡ ಪಾಟೀಲ್, ಕಲ್ಯಾಣ ವಿಭಾಗದ ಸಹ ಕಂದಾಯ ಅಧಿಕಾರಿಯಾದ ಚಿತ್ರಲೇಖಾ, ಸಮುದಾಯ ವ್ಯವಹಾರ ಅಧಿಕಾರಿಯಾದ ಕವಿತಾ, ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ ಬೀದಿಬದಿ ವ್ಯಾಪಾರಿಗಳ ಪಟ್ಟಣ ವ್ಯಾಪಾರ ಸಮಿತಿಯ ಸದಸ್ಯರು ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.
ಶ್ರೀರಾಮ, ಶ್ರೀಕೃಷ್ಣ, ಗಾಂಧೀಜಿಗೆ ಅವಹೇಳನ: ಇಬ್ಬರ ವಿರುದ್ಧ ‘FIR’ ದಾಖಲು
BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!








