Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಕೊಲಂಬಿಯಾದಲ್ಲಿ 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

23/03/2026 10:24 PM

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೌರಿ-ಗಣೇಶ ಹಬ್ಬದ ಹಿನ್ನಲೆ: 1,500 ಹೆಚ್ಚುವರಿ ‘KSRTC ಬಸ್’ ಸಂಚಾರದ ವ್ಯವಸ್ಥೆ
KARNATAKA

ಗೌರಿ-ಗಣೇಶ ಹಬ್ಬದ ಹಿನ್ನಲೆ: 1,500 ಹೆಚ್ಚುವರಿ ‘KSRTC ಬಸ್’ ಸಂಚಾರದ ವ್ಯವಸ್ಥೆ

By kannadanewsnow0923/08/2025 11:55 AM

ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 1500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ದಿನಾಂಕ: 26.08.2025 ರಂದು ಸ್ವರ್ಣಗೌರಿ ವ್ರತ, ದಿನಾಂಕ 27.08.2025ರಂದು ಗಣೇಶ ಚತುರ್ಥಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:25.08.2025 ಹಾಗೂ 26.08.2025 ರಂದು ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:27.08.2025 ಹಾಗೂ 31.08.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು.

• ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.

• ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
• ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
• ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.
• ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
• ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
• ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
• ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

• ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

• ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

• ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

Share. Facebook Twitter LinkedIn WhatsApp Email

Related Posts

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM1 Min Read

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM2 Mins Read

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM1 Min Read
Recent News

BIG BREAKING: ಕೊಲಂಬಿಯಾದಲ್ಲಿ 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

23/03/2026 10:24 PM

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM
State News
KARNATAKA

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

By kannadanewsnow0923/03/2026 9:57 PM KARNATAKA 1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಡೆದ ಎರಡು ಬೈಕ್‌ಗಳ ನಡುವಿನ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ…

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

23/03/2026 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.