ದೆಹಲಿ: ಗುಜರಾತ್ನ ಅಹಮದಾಬಾದ್ನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಯ ಮೇಲೆ ಪೊಲೀಸರು ಭಾನುವಾರ ದಾಳಿ ನಡೆಸಿದ್ದಾರೆ. ಗುಜರಾತ್ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಈ ದಾಳಿ ನಡೆದಿದೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಹಮದಾಬಾದ್ಗೆ ಆಗಮಿಸಿದ ಕೂಡಲೇ ದಾಳಿ ನಡೆಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಗುಜರಾತ್ ಘಟಕದ ನಾಯಕರು ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಅರವಿಂದ್ ಕೇಜ್ರಿವಾಲ್, ಗುಜರಾತ್ ಜನರಿಂದ ಎಎಪಿಗೆ ಸಿಗುತ್ತಿರುವ ಅಪಾರ ಬೆಂಬಲದಿಂದ ಬಿಜೆಪಿ ತೀವ್ರವಾಗಿ ನಲುಗಿದೆ. ಎಎಪಿಯ ನಾಯಕರು ಮತ್ತು ಕಾರ್ಯಕರ್ತರು ʻಕಠಿಣ ಪ್ರಾಮಾಣಿಕರುʼ.ಗುಜರಾತ್ ಪೊಲೀಸರಿಗೆ ಪಕ್ಷದ ಕಚೇರಿಯಲ್ಲಿ ಏನೂ ಸಿಗಲಿಲ್ಲ ಎಂದು ಹೇಳಿದ್ದಾರೆ. ಆದ್ರೆ, ಎಎಪಿಯ ಹೇಳಿಕೆಗೆ ಗುಜರಾತ್ ಪೊಲೀಸರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
गुजरात की जनता से मिल रहे अपार समर्थन से भाजपा बुरी तरह बौखला गयी है। “आप” के पक्ष में गुजरात में आँधी चल रही है
दिल्ली के बाद अब गुजरात में भी रेड करनी शुरू कर दी। दिल्ली में कुछ नहीं मिला, गुजरात में भी कुछ नहीं मिला
हम कट्टर ईमानदार और देशभक्त लोग हैं https://t.co/GBu1ddoSIY
— Arvind Kejriwal (@ArvindKejriwal) September 11, 2022
“ದೆಹಲಿಯ ನಂತರ ಗುಜರಾತ್ನಲ್ಲಿಯೂ ದಾಳಿಗಳು ಆರಂಭವಾಗಿವೆ. ದೆಹಲಿಯಲ್ಲಿ ಏನೂ ಸಿಗಲಿಲ್ಲ. ಗುಜರಾತ್ನಲ್ಲೂ ಏನೂ ಸಿಕ್ಕಿಲ್ಲ. ನಾವು ಪ್ರಾಮಾಣಿಕ ದೇಶಭಕ್ತರು” ಎಂದು ಟ್ವೀಟ್ ಮಾಡಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆ ಈ ವರ್ಷದ ಅಂತ್ಯದಲ್ಲಿ ನಡೆಯಲಿದೆ.
BREAKING NEWS : ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣ : ಮಂಡ್ಯ ಪೊಲೀಸರಿಂದ ಮತ್ತೊಬ್ಬ ಆರೋಪಿ ಅರೆಸ್ಟ್