ಬೆಂಗಳೂರು: ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಕೃತಕ ಬುದ್ಧಿಮತ್ತೆ (Artificial Intelligence-AI) ತಂತ್ರಜ್ಞಾನ ಆಧಾರಿತ ಡ್ರೋನ್ ಕ್ಯಾಮರಾ ಅಳವಡಿಸಲಾಗುವುದು. ಕಾಡುಪ್ರಾಣಿಗಳು ನಾಡಿನತ್ತ ಬಾರದಂತೆ ಕ್ರಮ ಕೈಗೊಳ್ಳಲು ಕಮಾಂಡಿಂಗ್ ಸೆಂಟರ್ ತೆರೆಯಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.
ವನ್ಯಜೀವಿ ಮಾನವ ಸಂಘರ್ಷ ನಿಯಂತ್ರಿಸಲು ರಾಜ್ಯಮಟ್ಟದ ನಿರ್ವಹಣಾ ಕಾರ್ಯಪಡೆ ರಚಿಸಲಾಗುತ್ತಿದ್ದು, ಈ ಕಾರ್ಯಪಡೆ ವನ್ಯಜೀವಿಗಳು ನಾಡಿಗೆ ಬರುತ್ತಿರುವ ಬಗ್ಗೆ ಸಮಗ್ರ ಅಧ್ಯಯನ ನಡೆಸಲಿದೆ ಜೊತೆಗೆ ಅಧಿಕಾರಿ, ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆಯೂ ಪರಾಮರ್ಶಿಸಲಿದೆ ಎಂದರು.
ಕೆಲವು ಅಧಿಕಾರಿಗಳು ತಮ್ಮ ಕುಟುಂಬದವರೊಂದಿಗೆ ಕಾಡಿನೊಳಗೆ ಮೋಜು ಮಸ್ತಿ ಮಾಡುತ್ತಿದ್ದಾರೆ ಈ ಬಗ್ಗೆ ಕ್ರಮ ಆಗುತ್ತದೆಯೇ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿಯಮ ಎಲ್ಲರಿಗೂ ಒಂದೇ. ಯಾವುದೇ ಅಧಿಕಾರಿ ನಿಯಮ ಉಲ್ಲಂಘಿಸಿದ್ದರೆ ಅವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಆಗಲಿದೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.
ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರಿತ ಡ್ರೋನ್ ಕ್ಯಾಮರಾ ಅಳವಡಿಸಲಾಗುವುದು. ಕಾಡುಪ್ರಾಣಿಗಳು ನಾಡಿನತ್ತ ಬಾರದಂತೆ ಕ್ರಮ ಕೈಗೊಳ್ಳಲು ಕಮಾಂಡಿಂಗ್ ಸೆಂಟರ್ ತೆರೆಯಲಾಗುವುದು ಎಂದು ಅರಣ್ಯ ಸಚಿವರಾದ @eshwar_khandre ಅವರು ತಿಳಿಸಿದ್ದಾರೆ. pic.twitter.com/18v7VtxmOL
— DIPR Karnataka (@KarnatakaVarthe) November 3, 2025
SC, ST ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ‘ಉಚಿತ ತರಬೇತಿ’ ಕಾರ್ಯಾಗಾರ ‘ಡಿಎಸ್ ವೀರಯ್ಯ’ ಉದ್ಘಾಟನೆ
‘ಅಂತಾರಾಷ್ಟ್ರೀಯ ಕ್ರೀಡೆ’ಯಲ್ಲಿ ಪದಕ ಗೆದ್ದರೇ ‘ಪೊಲೀಸ್ ಹುದ್ದೆ’: ಸಿಎಂ ಸಿದ್ಧರಾಮಯ್ಯ ಘೋಷಣೆ








