ಮಂಗಳೂರು: ಧರ್ಮಸ್ಛಳ ಪೊಲೀಸ್ ಠಾಣೆಯಲ್ಲಿ ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಆರೋಪದಡಿ ಸುಮೋಟೋ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವು ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್.19ರಂದು ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಇಂದು ಧರ್ಮಸ್ಥಳ ಪೊಲೀಸರು ಸಮೀರ್ ಎಂ.ಡಿಯನ್ನು ಬಂಧಿಸೋದಕ್ಕೂ ಅವರ ಮನೆಗೆ ತೆರಳಿದ್ದರು. ಅವರು ನಾಪತ್ತೆಯಾಗಿದ್ದಾಗಿ ತಿಳಿದು ಬಂದಿತ್ತು. ಈ ಬೆನ್ನಲ್ಲೇ ಸಮೀರ್ ಎಂ.ಡಿ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದಂತ ಮಂಗಳೂರು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ತಿದ್ದುಪಡಿ ವಿಧೇಯಕ 2025 ಅಂಗೀಕಾರ