ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಎಸ್.ಎಂ.ಕೃಷ್ಣ ಅವರದ್ದು ಶಿಸ್ತುಬದ್ಧ ಜೀವನ. ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ವೈದ್ಯರು ತಿಳಿಸಿದ್ದು ಶೀಘ್ರ ಗುಣಮುಖರಾಗಲಿದ್ದಾರೆ ಎಂದು ಹೇಳಿದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ತಿಳಿಯಿತ್ತು. ಹೀಗಾಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದೇನೆ. ಆದಷ್ಟು ಬೇಗ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಕೆ.ಮುಳುಗುಂದ್, ಶಾಸಕರಾದ ದಿನೇಶ್ ಗೂಳಿಗೌಡ ಅವರು ಜೊತೆಯಲ್ಲಿದ್ದರು.

ಪ್ರಜ್ವಲ್ ‘ಪೆನ್ ಡ್ರೈವ್’ ಕೇಸಲ್ಲಿ ಹಾಸನ ಮಾಜಿ ಶಾಸಕನ ಕೈವಾಡವಿದೆ : ಶಾಸಕ ರವಿಗಣಿಗ ಗಂಭೀರ ಆರೋಪ

ರಾಜ್ಯದಲ್ಲಿ 2ನೇ ಹಂತದ ಚುನಾವಣೆಯಲ್ಲಿ ಶೇ.66.74ರಷ್ಟು ಮತದಾನ: 227 ಅಭ್ಯರ್ಥಿಗಳ ಭವಿಷ್ಯ EVMನಲ್ಲಿ ಭದ್ರ

Share.
Exit mobile version