ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿದ್ದು ಇದರ ಮಧ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಒಂದೇ ಕಾರಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಹೌದು, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಂದೇ ಕಾರಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಐಪಿ ಟರ್ಮಿನಲ್ ನಲ್ಲಿ ಒಂದೇ ಕಾರಿನಲ್ಲಿ ಬಂದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರ ಕಾರಿಗೆ ಏಕಾಏಕಿ ಭದ್ರತಾ ಸಿಬ್ಬಂದಿ ಅಡ್ಡಲಾಗಿ ಬಂದಿದ್ದಾನೆ. ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.








