BREAKING: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿರಿಯ ಪುತ್ರ ‘ಮಿಲಿಂದ್ ಖರ್ಗೆ’ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿರಿಯ ಪುತ್ರ ಮಿಲಿಂದ್ ಖರ್ಗೆ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್ ನಿಂದ ಎಂಬಿಎ ಪದವಿಯನ್ನು ಖರ್ಗೆ ಪುತ್ರ ಮಿಲಿಂದ್ ಖರ್ಗೆ ಪಡೆದಿದ್ದರು. ಖಾಸಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಅವರು, ರಾಜಕೀಯದಿಂದ ದೂರವೇ ಉಳಿದಿದ್ದರು. … Continue reading BREAKING: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿರಿಯ ಪುತ್ರ ‘ಮಿಲಿಂದ್ ಖರ್ಗೆ’ ಆರೋಗ್ಯ ಸ್ಥಿತಿ ಗಂಭೀರ