Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಇನ್ಮುಂದೆ ‘ಫೇಸ್ ರೆಕಾಗ್ನಿಷನ್’ ಹಾಜರಾತಿ: ‘ನಿರಂತರ’ ಯೋಜನೆ ಜಾರಿ!

BIG BREAKING: AICC ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಇನ್ನಿಲ್ಲ

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: AICC ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಇನ್ನಿಲ್ಲ
KARNATAKA

BIG BREAKING: AICC ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಇನ್ನಿಲ್ಲ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಎಐಸಿಸಿ (AICC) ಕಾರ್ಯದರ್ಶಿ ಹಾಗೂ ಕರ್ನಾಟಕ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

​ಕಾಂಗ್ರೆಸ್ ಪಕ್ಷದ ಅತ್ಯಂತ ನಿಷ್ಠಾವಂತ ಕಾರ್ಯಕರ್ತ ಹಾಗೂ ಸಂಘಟಕರಾಗಿದ್ದ ಸೂರಜ್ ಹೆಗ್ಡೆ ಅವರ ಅಕಾಲಿಕ ಅಗಲಿಕೆಗೆ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಮತ್ತು ಅಪಾರ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

​ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ

​ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಹೋದ್ಯೋಗಿಯಾಗಿದ್ದ ಸೂರಜ್ ಹೆಗ್ಡೆ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ರಾಜಕೀಯ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದ ಅವರು, ತಮ್ಮ ಸರಳತೆ, ಸ್ನೇಹಪರ ವ್ಯಕ್ತಿತ್ವ ಹಾಗೂ ಕಾರ್ಯಕರ್ತರೊಂದಿಗೆ ಹೊಂದಿದ್ದ ಆತ್ಮೀಯತೆಯಿಂದ ಗುರುತಿಸಿಕೊಂಡಿದ್ದರು. ಅವರ ನಿಧನವು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ನಾಯಕರು ಕಂಬನಿ ಮಿಡಿದಿದ್ದಾರೆ.

​”ಸೂರಜ್ ಹೆಗ್ಡೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ಪ್ರಮುಖ ನಾಯಕರು ಪ್ರಾರ್ಥಿಸಿದ್ದಾರೆ.

​ಮೃತರು ಪತ್ನಿ, ಮಕ್ಕಳನ್ನು ಸೇರಿದಂತೆ ಅಪಾರ ಬಂಧುಬಳಗ, ಸ್ನೇಹಿತರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.

ಸಿಎಂ ಡಿ.ಕೆ ಶಿವಕುಮಾರ್ ಸಂತಾನ

ಸೂರಜ್ ಹೆಗಡೆ ಅವರ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

“ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸ್ಸಿಗೆ ಆಘಾತವಾಗಿದೆ. ಚಿಕ್ಕ ವಯಸ್ಸಿಗೆ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲೇ ಆಗುತ್ತಿಲ್ಲ.

ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ.

ಸೂರಜ್ ಹೆಗ್ಡೆ ಅವರು ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸೂರಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಇನ್ಮುಂದೆ ‘ಫೇಸ್ ರೆಕಾಗ್ನಿಷನ್’ ಹಾಜರಾತಿ: ‘ನಿರಂತರ’ ಯೋಜನೆ ಜಾರಿ!

1 Min Read

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

1 Min Read

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

2 Mins Read
Recent News

ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಇನ್ಮುಂದೆ ‘ಫೇಸ್ ರೆಕಾಗ್ನಿಷನ್’ ಹಾಜರಾತಿ: ‘ನಿರಂತರ’ ಯೋಜನೆ ಜಾರಿ!

BIG BREAKING: AICC ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಇನ್ನಿಲ್ಲ

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

State News
KARNATAKA

ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಇನ್ಮುಂದೆ ‘ಫೇಸ್ ರೆಕಾಗ್ನಿಷನ್’ ಹಾಜರಾತಿ: ‘ನಿರಂತರ’ ಯೋಜನೆ ಜಾರಿ!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಯೊಂದನ್ನು ತರಲಾಗುತ್ತಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ಸಾಲಿನಿಂದಲೇ ಡಿಜಿಟಲ್…

BIG BREAKING: AICC ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಇನ್ನಿಲ್ಲ

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.