ಬೆಂಗಳೂರು: ಬೆಂಗಳೂರಿನಲ್ಲಿ 27 ವರ್ಷದ ಕೆಡೆಟ್ ಟ್ರೈನಿ ಕಾಲೇಜು ಕ್ಯಾಂಪಸ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಹನ್ನೆಲೆಯಲ್ಲಿ ಆರು ವಾಯುಪಡೆ ಅಧಿಕಾರಿಗಳ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾಲಹಳ್ಳಿಯ ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ (ಎಎಫ್ಟಿಸಿ) ಶನಿವಾರ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಅವರ ವಿರುದ್ಧ ನ್ಯಾಯಾಲಯದ ವಿಚಾರಣೆಗೆ ಆದೇಶಿಸಿದ ನಂತರ ಕೆಡೆಟ್ ಟ್ರೈನಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೆಡೆಟ್ ಟ್ರೈನಿ ಅಂಕಿತ್ ಕುಮಾರ್ ಝಾ ಅವರು ತಮ್ಮ ಆತ್ಮಹತ್ಯೆ ಪತ್ರದಲ್ಲಿ ಏರ್ ಕಮೋಡೋರ್, ವಿಂಗ್ ಕಮಾಂಡರ್ ಮತ್ತು ಗ್ರೂಪ್ ಕ್ಯಾಪ್ಟನ್ ಹುದ್ದೆಗಳನ್ನು ಹೊಂದಿರುವ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದಾನೆ.
ಅಂಕಿತ್ ಝಾ ಅವರು ಕಾಲೇಜು ಕ್ಯಾಂಪಸ್ನಲ್ಲಿ ನಿರಂತರ ಕಿರುಕುಳ ಮತ್ತು ಚಿತ್ರಹಿಂಸೆ ಎದುರಿಸುತ್ತಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ತನಿಖಾಧಿಕಾರಿಗಳ ಪ್ರಕಾರ, ಅಂಕಿತ್ ಝಾ ಅವರ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಿದ ನಂತರ ಅವರ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.
ತಮಿಳುನಾಡು: ಚಲಿಸುತ್ತಿದ್ದ ರೈಲಿನಡಿ ಸಿಲುಕುತ್ತಿದ್ದವನ ಜೀವ ಉಳಿಸಿದ ರಕ್ಷಣಾ ಪಡೆ… ಎದೆ ಝಲ್ಲೆನಿಸುವ ದೃಶ್ಯ ವೈರಲ್